ರಾಜ್ಯ ನೂತನ ಶಿಕ್ಷಣ ನೀತಿ ಜಾರಿ : ಶಿಕ್ಷಣ ಸಚಿವ ಮಧುಬಂಗಾರಪ್ಪ

ಬೆಂಗಳೂರು : ರಾಜ್ಯದಲ್ಲಿ ಹೊಸ ರಾಜ್ಯ ಶಿಕ್ಷಣ ನೀತಿ ಜಾರಿಗೆ ತರಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಶಿಕ್ಷಣ ನೀತಿಯನ್ನ ಜಾರಿಗೆ ತರಲು 8 ತಿಂಗಳುಗಳ ಕಾಲಾವಕಾಶ ಇದೆ. ಸಣ್ಣ ತಂಡ ಮಾಡಿ ಪಠ್ಯ ಬದಲಾವಣೆ ಮಾಡಿದ ರೀತಿಯಲ್ಲಿ ರಾಜ್ಯ ಶಿಕ್ಷಣ ನೀತಿಯನ್ನು ಜಾರಿಗೆ ತರಲು ಸಾಧ್ಯವಿಲ್ಲ ಎಂದರು. ಅದಕ್ಕೆ ಕಾಲಾವಕಾಶ ಬೇಕು ಎಂದರು.

ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡಲು ರಾಜ್ಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಲಾಗುತ್ತಿದ್ದು,ಈಗಾಗಲೇ ತಂಡವನ್ನು ರಚಿಸಲಾಗಿದೆ. ಭಾಷೆಗಳಿಗೆ ಪ್ರಯೋಗಿಕ ತರಗತಿಗಳನ್ನು ಮಾಡುವ ನಿಟ್ಟಿನಲ್ಲಿ ಕೆಲಸ ಮಾಡಲಾಗುತ್ತದೆ.  ಕೇಂದ್ರ ಸರ್ಕಾರ ಜಾರಿಗೊಳಿಸಿದ ರಾಷ್ಟ್ರೀಯ ಶಿಕ್ಷಣ ನೀತಿಯು ಒಕ್ಕೂಟ ವ್ಯವಸ್ಥೆಗೆ ಮಾರಕವಾಗಿದೆ. ಅವೈಜ್ಞಾನಿಕ ಅಂಶಗಳನ್ನು ಒಳಗೊಂಡಿದೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read