ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್-ಬಿಜೆಪಿ ನಡುವೆ ಅಕ್ಕಿ ಪಾಲಿಟಿಕ್ಸ್ ತಾರಕಕ್ಕೇರಿದೆ, ರಾಜ್ಯಕ್ಕೆ ಹೆಚ್ಚುವರಿ ಅಕ್ಕಿ ಪೂರೈಕೆ ಮಾಡದ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಳೆ ರಾಜ್ಯಾದ್ಯಂತ ಪ್ರತಿಭಟನೆ ಮಾಡಲು ನಿರ್ಧರಿಸಿದೆ.
ಈ ಬಗ್ಗೆ ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್ ಹೆಚ್ಚುವರಿ ಅಕ್ಕಿ ಪೂರೈಸಲು ಕೇಂದ್ರ ಸರ್ಕಾರ ನಿರಾಕರಣೆ ಮಾಡುತ್ತಿದ್ದು, ಹಾಗಾಗಿ ಕೇಂದ್ರದ ನಡೆ ಖಂಡಿಸಿ ನಾಳೆ ಎಲ್ಲಾ ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ ಮಾಡುತ್ತೇವೆ. ನಾನು ಕೂಡ ಪ್ರತಿಭಟನೆಯಲ್ಲಿ ಭಾಗಿಯಾಗುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ಕಾಂಗ್ರೆಸ್ ಸಿದ್ದತೆ ನಡೆಸಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಯಲಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ.
ಪ್ರತಿಭಟನೆಗೆ ಬಿಜೆಪಿ ವ್ಯಂಗ್ಯ
ಅನ್ನಭಾಗ್ಯಕ್ಕೆ ಅಕ್ಕಿ ಕೊಂಡುಕೊಳ್ಳಲೂ ಆಗದ, ಅಕ್ಕಿ ಕೊಡಲೂ ಆಗದ “ರಾಜ್ಯ ಕಾಂಗ್ರೆಸ್ ಸರ್ಕಾರದ” ವಿರುದ್ಧ ರಾಜ್ಯ ಕಾಂಗ್ರೆಸ್ನಿಂದ ನಾಳೆ ಜೂನ್ 20ರಂದು ರಾಜ್ಯಾದ್ಯಂತ ಎಲ್ಲಾ ಜಿಲ್ಲಾಕೇಂದ್ರಗಳಲ್ಲಿ ಪ್ರತಿಭಟನೆ !!!ದಯವಿಟ್ಟುಪಾಲ್ಗೊಳ್ಳಿ! ಎಂದು ಬಿಜೆಪಿ ಟ್ವೀಟ್ ಮಾಡಿದೆ.
https://twitter.com/BJP4Karnataka/status/1670631432589541376