ರೈತರು ಸೇರಿ ರಾಜ್ಯದ ಜನತೆಗೆ ಗುಡ್ ನ್ಯೂಸ್: ಪಹಣಿ ಲೋಪ ಸೇರಿ ಎಲ್ಲಾ ಸಮಸ್ಯೆ ಬಗೆಹರಿಸಲು ರಾಜ್ಯಾದ್ಯಂತ ‘ಕಂದಾಯ ಅದಾಲತ್’

ಬೆಂಗಳೂರು: ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಜನಸಾಮಾನ್ಯರ ಎಲ್ಲಾ ಸಮಸ್ಯೆಗಳನ್ನು ಒಂದೇ ಸೂರಿನಡಿ ಬಗೆಹರಿಸುವ ನಿಟ್ಟಿನಲ್ಲಿ ಶೀಘ್ರದಲ್ಲೇ ರಾಜ್ಯಾದ್ಯಂತ ಕಂದಾಯ ಅದಾಲತ್ ಗೆ ಮರು ಚಾಲನೆ ನೀಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ

ಪಹಣಿಗಳಲ್ಲಿನ ಲೋಪದೋಷಗಳನ್ನು ಸರಿಪಡಿಸಲು ರಾಜ್ಯಾದ್ಯಂತ ಮತ್ತೊಮ್ಮೆ ಕಂದಾಯ ಅದಾಲತ್‌ ಆಂದೋಲನ ಕೈಗೊಳ್ಳಬೇಕು. ಅಧಿಕಾರಿಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು. ಕಾಲಕಾಲಕ್ಕೆ ಪಹಣಿ ತಿದ್ದುಪಡಿ ಅಧಿಕಾರವನ್ನು ಸಹಾಯಕ ಆಯುಕ್ತರಿಂದ ತಹಶೀಲ್ದಾರರಿಗೆ ಪ್ರತ್ಯಾಯೋಜಿಸಿ ಮುಂದುವರೆಸಿಕೊಂಡು ಬರಲಾಗುತ್ತಿದೆ.

ಅದರಂತೆ ಅಧಿಕಾರ ಪ್ರತ್ಯಾಯೋಜನೆಯ ಅವಧಿ ಕಳೆದ ಡಿಸೆಂಬರ್‌ 31ಕ್ಕೆ ಮುಕ್ತಾಯಗೊಂಡಿದೆ. ಅದಾಲತ್‌ ಮೂಲಕ ಪಹಣಿ ತಿದ್ದುಪಡಿ ಅಧಿಕಾರವನ್ನು ಅವಧಿ ವಿಸ್ತರಿಸಿ ಈಗಾಗಲೇ ಆದೇಶ ಹೊರಡಿಸಿದ್ದು, ಸದ್ಯದಲ್ಲೇ ಅದಾಲತ್‌ನ ದಿನಾಂಕ ಘೋಷಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

https://twitter.com/KarnatakaVarthe/status/1752325907967246337

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read