HomeLatest NewsBIG NEWS : ರಾಜ್ಯಾದ್ಯಂತ  ‘ಕಂದಾಯ ಅದಾಲತ್  : ರೈತರು, ಸಾರ್ವಜನಿಕರ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ.!

BIG NEWS : ರಾಜ್ಯಾದ್ಯಂತ  ‘ಕಂದಾಯ ಅದಾಲತ್  : ರೈತರು, ಸಾರ್ವಜನಿಕರ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ.!

ಬೆಂಗಳೂರು : ಪಹಣಿ ತಿದ್ದುಪಡಿ ಅಧಿಕಾರವನ್ನು ತಹಶೀಲ್ದಾರರಿಗೆ ಪ್ರತ್ಯಾಯೋಜಿಸುವ ಅವಧಿಯನ್ನು ವಿಸ್ತರಿಸುವ ಕುರಿತು ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಏನಿದೆ ಆದೇಶದಲ್ಲಿ..?

ಸರ್ಕಾರದ ವಿವಿಧ ಆದೇಶಗಳಲ್ಲಿ ಕಾಲಕಾಲಕ್ಕೆ ಪಹಣಿ ತಿದ್ದುಪಡಿ ಅಧಿಕಾರವನ್ನು ಸಹಾಯಕ ಆಯುಕ್ತರಿಂದ ತಹಶೀಲ್ದಾರರಿಗೆ ಪ್ರತ್ಯಾಯೋಜಿಸಿ ಮುಂದುವರೆಸಿಕೊಂಡು ಬರಲಾಗುತ್ತಿದೆ. ಅದರಂತೆ ದಿನಾಂಕ:30.06.2025 ಕ್ಕೆ ಸದರಿ ಪ್ರತ್ಯಾಯೋಜನೆಯ ಅವಧಿಯು ಮುಕ್ತಾಯಗೊಂಡಿರುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸದರಿ ಕಂದಾಯ ಅದಾಲತ್ ಯೋಜನೆಯನ್ನು 2014 ನೇ ಸಾಲಿನಿಂದ ಆರಂಭಿಸಿದ್ದು, ಜೂನ್ 2025 ರವರೆಗೂ ವಿಸ್ತರಿಸಲಾಗಿರುತ್ತದೆ. ಆದಾಗ್ಯೂ ಪಹಣಿ ತಿದ್ದುಪಡಿ ಪ್ರಕರಣಗಳನ್ನು ವಿಲೇವಾರಿ ಮಾಡುವ ಸಂಬಂಧ ಕಂದಾಯ ಅದಾಲತ್ ಅವಧಿಯನ್ನು ವಿಸ್ತರಿಸಲು ಕೋರಿ ಕೆಲವು ತಾಲ್ಲೂಕುಗಳಿಂದ ಮನವಿಗಳು ಸ್ವೀಕೃತವಾಗಿರುತ್ತವೆ.ಆದುದರಿಂದ ಕಂದಾಯ ಅದಾಲತ್ ಕಾರ್ಯಕ್ರಮದ ಮೂಲಕ ಪಹಣಿ ತಿದ್ದುಪಡಿ ಅಧಿಕಾರವನ್ನು ತಹಶೀಲ್ದಾರರಿಗೆ ಪ್ರತ್ಯಾಯೋಜಿಸುವ ಅವಧಿಯನ್ನು ವಿಸ್ತರಿಸುವ ಕುರಿತು ತಮ್ಮ ಸ್ಪಷ್ಟ ಅಭಿಪ್ರಾಯವನ್ನು 15 ದಿನಗಳಲ್ಲಿ ಸಲ್ಲಿಸಲು ಈ ಮೂಲಕ ತಿಳಿಸಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular