HomeKarnatakaಚಾಲಕನ ನಿರ್ಲಕ್ಷ್ಯದಿಂದ KSRTC ಬಸ್ ಡಿಕ್ಕಿ: ಮತ್ತೊಂದು ಪ್ರತಿಮೆಗೆ ಹಾನಿ

ಚಾಲಕನ ನಿರ್ಲಕ್ಷ್ಯದಿಂದ KSRTC ಬಸ್ ಡಿಕ್ಕಿ: ಮತ್ತೊಂದು ಪ್ರತಿಮೆಗೆ ಹಾನಿ

ಮಡಿಕೇರಿ: ಮಡಿಕೇರಿಯಲ್ಲಿ ಕೆಎಎಸ್ಆರ್ಟಿಸಿ ಬಸ್ ಚಾಲಕ ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದಾನೆ. ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ಪ್ರತಿಮೆಗೆ ಬಸ್ ಡಿಕ್ಕಿ ಹೊಡೆಸಿದ್ದು, ಪ್ರತಿಮೆಗೆ ಹಾನಿಯಾಗಿದೆ.

ಮಡಿಕೇರಿಯ ಹಳೆ ಬಸ್ ನಿಲ್ದಾಣದ ಬಳಿ ಇರುವ ದೇವಯ್ಯ ಪ್ರತಿಮೆಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದಿದ್ದು ಪ್ರತಿಮೆಯ ಅಡಿಗಲ್ಲಿಗೆ ಭಾಗಶಃ ಹಾನಿಯಾಗಿದೆ. ಕೆಎಸ್ಆರ್ಟಿಸಿ ಬಸ್ ಚಾಲಕನ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಘಟನೆ ಖಂಡಿಸಿ ಪ್ರತಿಭಟನೆ ನಡೆಸಿದ್ದಾರೆ. ಇದರಿಂದಾಗಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸರ್ಕಾರಿ ಬಸ್ ಚಾಲಕನ ವಿರುದ್ಧ ನಗರ ಸಂಚಾರ ಠಾಣೆಗೆ ದೂರು ನೀಡಲಾಗಿದೆ. ನಾಲ್ಕು ದಿನದ ಹಿಂದೆಯಷ್ಟೇ ಜನರಲ್ ತಿಮ್ಮಯ್ಯ ಪ್ರತಿಮೆಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಜನರಲ್ ತಿಮ್ಮಯ್ಯನವರ ಪ್ರತಿಮೆ ಉರುಳಿ ಬಿದ್ದಿತ್ತು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular