HomeKarnatakaಪರೀಕ್ಷೆ ಮುಗಿಯುವವರೆಗೂ ಮೊಬೈಲ್ ನಿಂದ ದೂರವಿರಿ, ಮಾನಸಿಕವಾಗಿ ಸಿದ್ಧರಾಗಲು ಸಲಹೆ

ಪರೀಕ್ಷೆ ಮುಗಿಯುವವರೆಗೂ ಮೊಬೈಲ್ ನಿಂದ ದೂರವಿರಿ, ಮಾನಸಿಕವಾಗಿ ಸಿದ್ಧರಾಗಲು ಸಲಹೆ

ಹಾಸನ: ಎಸ್.ಎಸ್.ಎಲ್.ಸಿ ಪರೀಕ್ಷೆ ಮುಗಿಯುವವರೆಗೂ ಮೊಬೈಲ್ ನಿಂದ ದೂರವಿದ್ದು, ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯುವ ಮೂಲಕ ತಮ್ಮ ಮುಂದಿನ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಎಸ್ ಲತಾ ಕುಮಾರಿ ಅವರು ಸಲಹೆ ನೀಡಿದರು.

ನಗರ ಗಂಧದ ಕೋಟಿ ಆವರಣದಲ್ಲಿರುವ ಸರ್ಕಾರಿ ಬಾಲಕರ ಪ್ರೌಢಶಾಲೆ ಸಂಭಾಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಎಸ್.ಎಸ್.ಎಲ್.ಸಿ ಪರೀಕ್ಷಾ ಸಂಭ್ರಮ ಹಾಗೂ “ಯಶಸ್ಸು” ಫ್ರೆಡ್ ಪ್ರೆಂಡ್ ನ ಆನ್ ಲೈನ್ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಪರೀಕ್ಷೆ ಸಿದ್ಧತೆಗಳ ವೇಳೆಯಲ್ಲಿ ಆರೋಗ್ಯವನ್ನು ಸುಸ್ಥಿಯಲ್ಲಿ ಇಟ್ಟುಕೊಳ್ಳಬೇಕು, ಹೊರಗಿನ ಆಹಾರ ಸೇವಿಸಬಾರದು, ಮನೆಯಲ್ಲಿಯೇ ತಯಾರಿಸಿದ ಶುದ್ಧ ಆಹಾರವನ್ನು ಮಾತ್ರ ಬಳಸಬೇಕು, ಪರೀಕ್ಷೆ ಎದುರಿಸಲು ಮಾನಸಿಕವಾಗಿ ಸಿದ್ಧವಾಗಬೇಕು ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಸ್.ಎಸ್.ಎಲ್‌ಸಿ ವಿದ್ಯಾರ್ಥಿಗಳ ಮುಂದಿನ ಭವಿಷ್ಯಕ್ಕಾಗಿ ಪ್ರತಿವಾರ 16 ಅಂಶಗಳನ್ನು ಒಳಗೊಂಡ ಫ್ರೈಡೆ ಫ್ರೆಂಡ್ ಎಂಬ ವಿನೂತನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ 536 ಶಾಲೆಗಳಲ್ಲಿ ಮಕ್ಕಳು ಈ ಸಂವಾದವನ್ನು ಆಲಿಸಲಿದ್ದಾರೆ ಎಂದರು.

ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 20 ಸಾವಿರಕ್ಕೆ ಹೆಚ್ಚು ಮಕ್ಕಳು ನೋಂದಾಯಿಸಿಕೊಂಡಿದ್ದು, ಜಿಲ್ಲೆಯ ಶಿಕ್ಷಕರು, ಮುಖ್ಯೋಪಾಧ್ಯಾಯರು ಶ್ರಮದಿಂದ ಉತ್ತಮ ಫಲಿತಾಂಶವನ್ನು ನಿರೀಕ್ಷಿಸಲಾಗಿದೆ, ಶಿಕ್ಷಕರ ಶ್ರಮವನ್ನು ಮಕ್ಕಳು ಎಂದಿಗೂ ಮರೆಯಬಾರದು ಎಂದು ತಿಳಿಸಿದರು.

ಪರೀಕ್ಷಾ ಕೇಂದ್ರಕ್ಕೆ ಸುಮಾರು 40 ನಿಮಿಷ ಮುಂಚಿತವಾಗಿ ಇರಬೇಕು, ಗ್ರಾಮೀಣ ಪ್ರದೇಶದಿಂದ ಬರುವ ಮಕ್ಕಳಿಗೆ ಬಸ್ ಸಮಯ ಬದಲಾವಣೆ ಅಗತ್ಯವಿದ್ದರೆ ಮೊದಲೇ ಮಾಹಿತಿ ನೀಡಬೇಕು ಅಗತ್ಯ ಕ್ರಮವಹಿಸಲಾಗುವುದು ಎಂದು ತಿಳಿಸಿದರು.

ಪ್ರತಿಯೊಂದು ಪ್ರಶ್ನೆಗಳಿಗೂ ಉತ್ತರ ಬರೆಯಬೇಕು, ಪ್ರತಿಯೊಬ್ಬ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಬೇಕು ಪರೀಕ್ಷೆ ಬರೆಯುವ ಸಮಯದಲ್ಲಿ ಗೊಂದಲ ಇರಬಾರದು ಎಂದರು.

ಪರೀಕ್ಷೆಯಲ್ಲಿ ಉತ್ತೀರ್ಣ ಆಗುತ್ತೇನೆ ಎಂದು ವಿದ್ಯಾರ್ಥಿಗಳು ಮಾನಸಿಕವಾಗಿ ಸಿದ್ದವಾಗಿರಬೇಕು, ಜಿಲ್ಲೆಯ ಎಲ್ಲಾ ಶಾಲೆಗಳು ಶೇಕಡ 100ರಷ್ಟು ಫಲಿತಾಂಶವನ್ನು ನಿರೀಕ್ಷಿಸಲಾಗಿದೆ ಎಂದು ಅವರು ತಿಳಿಸಿದರು.

ಪರೀಕ್ಷೆ ಮುಗಿದ ನಂತರವೇ ಮುಂದೆ ಯಾವ ವಿಷಯವನ್ನು ಆಯ್ಕೆ ಮಾಡಿಕೊಳ್ಳಬೇಕು ಎಂಬುದನ್ನು ಯೋಚಿಸಿರಬೇಕು, ಉನ್ನತ ಶಿಕ್ಷಣವನ್ನು ಪಡೆಯುವ ಮೂಲಕ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಅವರು ಮಕ್ಕಳಿಗೆ ಸಲಹೆ ನೀಡಿದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular