HomeKarnatakaBREAKING : ಬೆಂಗಳೂರಿನ ಹೋಟೆಲ್ ನಲ್ಲಿ ಸ್ಟೀಮರ್ ಸ್ಪೋಟ : ಮೂವರು ಕಾರ್ಮಿಕರಿಗೆ ಗಂಭೀರ ಗಾಯ

BREAKING : ಬೆಂಗಳೂರಿನ ಹೋಟೆಲ್ ನಲ್ಲಿ ಸ್ಟೀಮರ್ ಸ್ಪೋಟ : ಮೂವರು ಕಾರ್ಮಿಕರಿಗೆ ಗಂಭೀರ ಗಾಯ

ಬೆಂಗಳೂರು : ಬಿಬಿಎಂಪಿ ಮುಖ್ಯ ಕಚೇರಿಯಲ್ಲಿ ಅಗ್ನಿ ಅವಘಡ ನಡೆದ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್ ನಲ್ಲಿ ಸ್ಟೀಮರ್ ಸ್ಪೋಟವಾಗಿದ್ದು, ಮೂವರು ಕಾರ್ಮಿಕರಿಗೆ ಗಂಭೀರ ಗಾಯಗಳಾಗಿದೆ.

ಬೆಂಗಳೂರಿನ ನಾಗರಭಾವಿಯಲ್ಲಿರುವ ನಮ್ಮೂರ ತಿಂಡಿ ಹೋಟೆಲ್ ನಲ್ಲಿ ಈ ಘಟನೆ ನಡೆದಿದೆ. ಇದ್ದಕ್ಕಿದ್ದ ಹಾಗೆ ಅಡುಗೆ ಕೋಣೆಯಲ್ಲಿದ್ದ ಸ್ಟೀಮರ್ ಸ್ಪೋಟಗೊಂಡಿದೆ. ಗಾಯಗೊಂಡವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ನಡೆದ ಸ್ಥಳಕ್ಕೆ ಜ್ಞಾನಭಾರತಿ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ಬಿಬಿಎಂಪಿ ಕಚೇರಿಯಲ್ಲಿ ಅಗ್ನಿ ಅವಘಡ ಪ್ರಕರಣ: ಮೂವರು ವಶಕ್ಕೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರು: ಬಿಬಿಎಂಪಿ ಮುಖ್ಯ ಕಚೇರಿಯ ಪ್ರಯೋಗಾಲಯ ಮತ್ತು ಕಚೇರಿ ಕಟ್ಟಡದಲ್ಲಿ ಅಗ್ನಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಘಟನೆಯಲ್ಲಿ ಗಾಯಗೊಂಡವರನ್ನು ವಿಕ್ಟೋರಿಯಾ ಆಸ್ಪತ್ರೆಯ ಐಸಿಯುಗೆ ದಾಖಲಿಸಲಾಗಿದೆ. ಹಲಸೂರು ಗೇಟ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ. ಘಟನೆ ನಡೆದ ಸಂದರ್ಭದಲ್ಲಿ ವಶಕ್ಕೆ ಪಡೆದ ಮೂವರು ಸ್ಥಳದಲ್ಲೇ ಇದ್ದರೂ ಗಾಯಗೊಂಡಿಲ್ಲ. ಸ್ಪೋಟದ ವೇಳೆ ಮೊದಲಿಗೆ ಓಡಿ ಬಂದಿದ್ದಾರೆ. ಅನುಮಾನದ ಮೇಲೆ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ ಎಂದು ಹೇಳಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular