
ವಿಧಾನ ಪರಿಷತ್ ನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಹೆಚ್ ಎಸ್ ಗೋಪಿನಾಥ್ ಪ್ರಶ್ನಗೆ ಉತ್ತರಿಸಿದರು.
ನಾವು ನುಡಿದಂತೆ ನಡೆಯುತ್ತೇವೆ, ಪ್ರಣಾಳಿಕೆಯಲ್ಲಿ ಭರವಸೆ ನೀಡಿದಂತೆ ಖಾಲಿ ಇರುವ ಎಲ್ಲಾ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಸಿಎಂ ಭರವಸೆ ನೀಡಿದ್ದಾರೆ. ರಾಜ್ಯದಲ್ಲಿ ಒಟ್ಟು 43 ಇಲಾಖೆಗಳಿಂದ 7,72,225 ಹುದ್ದೆಗಳಿದ್ದು, ಇದರಲ್ಲಿ 5,16,105 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. 2,55,900 ಹುದ್ದೆಗಳು ಖಾಲಿಯಿದ್ದು, ಶೇ.33ರಷ್ಟು ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಇನ್ನೂ, ಸಿಎಂ ಸಿದ್ದರಾಮಯ್ಯ ಅವರು ನಾಳೆ ನೂತನ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಬಜೆಟ್ ಮಂಡಿಸಲಿದ್ದು, ಗ್ಯಾರಂಟಿ ಯೋಜನೆಗಳ ಜೊತೆಗೆ ಇನ್ನೂ ಹಲವರು ಜನಪ್ರಿಯ ಘೋಷಣೆ ಮಾಡುವ ಸಾಧ್ಯತೆ ಇದೆ.ಸಿಎಂ ಸಿದ್ದರಾಮಯ್ಯ ಅವರು 14 ನೇ ಬಾರಿಗೆ ರಾಜ್ಯ ಸರ್ಕಾರದ ಆಯವ್ಯಯ ಮಂಡಿಸಿ ದಾಖಲೆ ನಿರ್ಮಿಸುತ್ತಿದ್ದು, ರಾಜ್ಯದ ಸಮಗ್ರ ಅಭಿವೃದ್ಧಿ ಮತ್ತು ದೂರ ದೃಷ್ಟಿ ಆಲೋಚನೆಗಳನ್ನು ಕ್ರೂಢೀಕರಿಸಿ ಮಹತ್ವದ ಬಜೆಟ್ ಮಂಡನೆ ಮಾಡಲಿದ್ದು, ರಾಜ್ಯದ ಜನರ ಚಿತ್ತ ಸಿಎಂ ಸಿದ್ದರಾಮಯ್ಯರತ್ತ ನೆಟ್ಟಿದೆ.
ಚುನಾವಣೆಗೂ ಮುನ್ನ ರಾಜ್ಯ ಕಾಂಗ್ರೆಸ್ ಘೋಷಿಸಿದ್ದ 5 ಗ್ಯಾರಂಟಿ ಯೋಜನೆಗಳ ಜೊತೆಗೆ ಹಲವು ಜನಪ್ರಿಯ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದ್ದು, ಕೊಟ್ಟ ಭರವಸೆಯಂತೆ ಅಂಗನವಾಡಿ, ಆಶಾ ಕಾರ್ಯಕರ್ತರ ಗೌರವಧನ ಹೆಚ್ಚಳ ಮಾಡಲು ತಯಾರಿ ನಡೆಸಿದ್ದಾರೆ ಎನ್ನಲಾಗಿದೆ.

