HomeKarnatakaಸಿದ್ದರಾಮಯ್ಯ ಭೇಟಿಯಾದ ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದೇನು?

ಸಿದ್ದರಾಮಯ್ಯ ಭೇಟಿಯಾದ ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದೇನು?

ಬೆಂಗಳೂರು: ಸ್ಟಿಂಗ್ ಆಪರೇಷನ್ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದ್ದು, ಈ ನಡುವೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಮೈಸೂರಿನ ಕುವೆಂಪು ನಗರದಲ್ಲಿರುವ ಅವರ ನಿವಾಸಕ್ಕೆ ಹೋಗಿ ಭೇಟಿ ಮಾಡಿದ್ದಾರೆ. ಇದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿತ್ತು. ಈ ವಿಚಾರವಾಗಿ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಸಿಎಂ ಡಿ.ಕೆ.ಶಿವಕುಮಾರ್, ನಿನ್ನೆ ನಮ್ಮ ನಾಯಕ ಸಿದ್ದರಾಮಯ್ಯರನ್ನು ಭೇಟಿ ಮಾಡಿದ್ದೇನೆ. ಕೆಲವು ವಿಚಾರಗಳನ್ನು ವಿಚಾರಿಸೋದು ನನ್ನ ಧರ್ಮ ಅಲ್ವಾ, ಅದಕ್ಕೆ ಮೈಸೂರಿಗೆ ಹೋಗಿ ಭೇಟಿ ಮಾಡಿಕೊಂಡು ಬಂದಿದ್ದೇನೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಮ್ಮ ನಾಯಕರನ್ನು ಭೇಟಿಯಾಗೋದು ನನ್ನ ಧರ್ಮ. ಭೇಟಿ ಮಾಡಿ ವಿಚಾರಿಸೋದು ನನ್ನ ಧರ್ಮ ಅಲ್ವಾ? ಮಾಜಿ ಸಿಎಂ ಅವರನ್ನ ಭೇಟಿ ಮಾಡಿ ಬಂದಿದ್ದೀನಿ ಎಂದು ತಿಳಿಸಿದ್ದಾರೆ. ಸ್ಟಿಂಗ್ ಪ್ರಕರಣ ಹೊರಬಂದ ನಂತರ ಇದೇ ಮೊದಲ ಬಾರಿಗೆ ಮಾಜಿ ಸಿಎಂ ಸಿದ್ದರಾಮಯ್ಯರನ್ನು ಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾಗಿದ್ದಾರೆ.

ಸ್ಟಿಂಗ್ ಕಿಂಗ್ ಪಿನ್ ಬಂಧನ ಡೆಡ್ ಲೈನ್ ಮುಕ್ತಾಯ: ಡಿಜಿ-ಐಜಿಪಿ ಕಚೇರಿಗೆ ಜೆಡಿಎಸ್ ಮುತ್ತಿಗೆ ಯತ್ನ: ಕಾರ್ಯಕರ್ತರೊಂದಿಗೆ ಬೀದಿಗಿಳಿದ HDK

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸ್ಟಿಂಗ್ ಆಪರೇಷನ್ ಪ್ರಕರಣ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಸ್ಟಿಂಗ್ ಆಪರೇಷನ್ ಕಿಂಗ್​ಪಿನ್ ಬಂಧಿಸಲು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ನೀಡಿದ್ದ ಡೆಡ್​ಲೈನ್ ಅಂತ್ಯವಾಗಿರುವ ಹಿನ್ನೆಲೆಯಲ್ಲಿ ಇಂದು ಜೆಡಿಎಸ್ ಕಾರ್ಯಕರ್ತರು ಡಿಜಿ-ಐಜಿಪಿ ಕಚೇರಿಗೆ ಪಾದಯಾತ್ರೆ ಮೂಲಕ ತೆರಳಿ ಮುತ್ತಿಗೆ ಹಾಕಲು ಯತ್ನಿಸಿದರು.

ಜೆಡಿಎಸ್ ಕಾರ್ಯಕರ್ತರ ಜೊತೆ ಹೆಚ್.ಡಿ.ಕುಮಾರಸ್ವಾಮಿ ಕೂಡ ಬೀದಿಗಿಳಿದಿದ್ದು, ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ಡಿಜಿ-ಐಜಿಪಿ ಕಚೇರಿ ಮುಂದೆ ಹೈಡ್ರಾಮಾ ನಡೆಯಿತು.

ಇದಕ್ಕೂ ಮುನ್ನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಸಿದ ಕೇಂದ್ರ ಸಚಿವ ಕುಮಾರಸ್ವಾಮಿ, ಸ್ಟಿಂಗ್ ಆಪರೇಷನ್ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ಮುಕ್ತ ಅವಕಾಶ ನೀಡುತ್ತಿಲ್ಲ. ಆರೋಪಿ ಬಂಧನಕ್ಕೆ ನಾನು ಎರಡು ದಿನಗಳ ಗಡುವು ನೀಡಿದ್ದೆ. ಗಡುವು ಈಗ ಮುಕ್ತಾಯವಾಗಿದೆ. ಡೆಡ್ ಲೈನ್ ಮುಗಿದರೂ ಈವರೆಗೂ ಪೊಲೀಸರು ಸ್ಟಿಂಗ್ ಆರೋಪಿಯನ್ನು ಬಂಧಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರವೇ ಸ್ಟಿಂಗ್ ಆರೋಪಿಯನ್ನು ರಕ್ಷಣೆ ಮಾಡುತ್ತಿದೆ. ಈ ಬಗ್ಗೆ ಹೇಳಿದರೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನನ್ನ ಬಗ್ಗೆಯೇ ವ್ಯಂಗ್ಯವಡಿದ್ದಾರೆ. ಸಿಎಂ ಡಿ.ಕೆ.ಶಿವಕುಮಾರ್ ಪದೇ ಪದೇ ಸ್ಟಿಂಗ್ ಆರೋಪಿಯನ್ನು ಭೇಟಿಯಾಗಿದ್ದಾರೆ. ಆರೋಪಿ ನಿನ್ನೆಯಷ್ಟೇ ತಾನೇ ವಿಡಿಯೋ ಮಾಡಿದ್ದು ಎಂದು ಒಪ್ಪಿಕೊಂಡಿದ್ದಾನೆ. ಇಷ್ಟೆಲ್ಲಾ ನಡೆಯುತ್ತಿದ್ದರೂ ಆತನನ್ನು ಬಂಧಿಸಿ ತನಿಖೆ ನಡೆಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಾನು ಯಾವುದೇ ವೈಯಕ್ತಿಕ ಹೋರಾಟ ನಡೆಸುತ್ತಿಲ್ಲ. ಹಬ್ಬದ ಬಳಿಕ ಈ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ತಿಳಿಸಿದರು.

ಬಳಿಕ ಫ್ರೀಡಂ ಪಾರ್ಕ್ ನಿಂದ ನೃಪತುಂಗ ರಸ್ತೆವರೆ ಪಾದಯಾತ್ರೆಯಲ್ಲಿ ಆಗ್ರಮಿಸಿದ ಜೆಡಿಎಸ್ ಕಾರ್ಯಕರ್ಯರು ಡಿಜಿ=ಐಜಿಪಿ ಕಚೇರಿ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ಬ್ಯಾರಿಕೇಡ್ ಗಳನ್ನು ಅಳವಡಿಸಿ ತಡೆದರು. ಇದೇ ವೇಳೆ ಕೇಂದ್ರ ಸಚಿವ ಕುಮಾರಸ್ವಾಮಿ ಡಿಜಿ-ಐಜಿಪಿ ಕಚೇರಿಗೆ ಆಗಮಿಸಿದರು.

ಡಿಜಿ=ಐಜಿಪಿ ಡಾ.ಸಲೀಂ ಅವರೊಂದಿಗೆ ಚರ್ಚೆ ನಡೆಸಿದರು. ಸ್ಟಿಂಗ್ ಆಪರೇಷನ್ ಆರೋಪಿಯನ್ನು ತಕ್ಷಣ ಬಂಧಿಸಬೇಕು. ಪ್ರಕರಣದ ಬಗ್ಗೆ ಸಂಪೂರ್ಣ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಮನವಿ ಪತ್ರ ನೀಡಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular