ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಸೃಷ್ಟಿಸುರುವ ಸ್ಟಿಂಗ್ ಆಪರೇಷನ್ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಸ್ಟಿಂಗ್ ಆಪರೇಷನ್ ವಿಚಾರವಾಗಿ ವಿಪಕ್ಷಗಳು ಸರ್ಕಾರದ ವಿರುದ್ಧ ಸಮರ ಸಾರಿದ್ದು, ಸ್ಟಿಂಗ್ ಪ್ರಕರಣದ ಪ್ರಮುಖ ಆರೋಪಿಯನ್ನು ಇನ್ನೆರಡು ದಿನಗಳಲ್ಲಿ ಬಂಧಿಸುವಂತೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಪೊಲೀಸರುಗೆ ಡೆಡ್ ಲೈನ್ ನೀಡಿದ್ದಾರೆ. ಈ ನಡುವೆ ಜೆಡಿಎಸ್ ಕೂಡ ಸ್ಟಿಂಗ್ ಆಪರೇಷನ್ ಬಗ್ಗೆ ಕಮೀಷ್ನರ್ ಗೆ ದೂರು ನೀಡಿದೆ.
ಜೆಡಿಎಸ್ ಕಾನೂನು ಘಟಕದ ಪ್ರದೀಪ್ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದು, ರಾಜ್ಯದ ಪ್ರಭಾವಿ ನಾಯಕನ ಸ್ಟಿಂಗ್ ಮಾಡಲಾಗಿದೆ. ಹೀಗಾಗಿ ಸೂಕ್ತ ತನಿಖೆ ನಡೆಸಿ ಸ್ಟಿಂಗ್ ಆಪರೇಷನ್ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಡಿಯೋ ಅಪಪ್ರಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ 15 ಜನರನ್ನು ಸಿಸಿಬಿಯ ಸೈಬರ್ ಕ್ರೈಂ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ವಿಡಿಯೋ ಅಪ್ಲೋಡ್ ಮಾಡುವ ಉದ್ದೇಶಕ್ಕಾಗಿಯೇ ಯೂಟ್ಯೂಬ್ಚಾಲನ್ವೊಂದನ್ನು ತೆರೆಯಲಾಗಿದೆ ಎಂಬುವುದು ಕಂಡು ಬಂದಿದೆ. ಇನ್ನು ಸ್ಟಿಂಗ್ನ ಮಾಸ್ಟರ್ ಮೈಂಡ್ ಯಾರು ಎಂಬುವುದನ್ನು ಪತ್ತೆಹಚ್ಚಲು ತನಿಖೆ ಚುರುಕುಕೊಳಿಸಿದ್ದಾರೆ.
ಇನ್ನು ಸ್ಟಿಂಗ್ ಆಪರೇಷನ್ ಬಗ್ಗೆ ಸಚಿವರು ಅಂತರ ಕಾಯ್ದುಕೊಂಡಿದ್ದಾರೆ. ಕ್ಯಾಬಿನೆಟ್ ಸಭೆಯಲ್ಲೂ ಯಾವುದೇ ಅಭಿಪ್ರಾಯ ನೀಡಿದೇ ಮೌನಕ್ಕೆ ಜಾರಿದ್ದಾರೆ. ಕೆಲ ಸಚಿವರು ನೀವೇ ನಿರ್ಧಾರ ಮಾಡಿ ಅಂತಾ ಸಿಎಂಗೆ ವಿವೇಚನೆಗೆ ಬಿಟ್ಟಿದ್ದಾರೆ. ಇತ್ತ ಕೆಲ ಸಚಿವರು ಮಾಜಿ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ್ದಾರೆ. ಸಿದ್ದರಾಮಯ್ಯ ನಿವಾಸ ಕಾವೇರಿಗೆ ಸಚಿವರಾದ ಕೃಷ್ಣಭೈರೇಗೌಡ, ಎಂ.ಬಿ.ಪಾಟೀಲ್ ಭೇಟಿ ನೀಡಿ ಚರ್ಚೆ ನಡೆಸಿದ್ದಾರೆ.
ಸ್ಟಿಂಗ್ ಆಪರೇಷನ್ ಪ್ರಕರಣ: ಪ್ರಮುಖ ಆರೋಪಿಯ ಬಂಧನಕ್ಕೆ ಎರಡು ದಿನಗಳ ಡೆಡ್ ಲೈನ್ ನೀಡಿದ ಕೇಂದ್ರ ಸಚಿವ ಕುಮಾರಸ್ವಾಮಿ
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಅಲ್ಲೋಲಕಲ್ಲೋಲ ಸೃಷ್ಟಿಸಿರುವ ಸ್ಟಿಂಗ್ ಆಪರೇಷನ್ ವಿವಾದ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಪ್ರಕರಣದ ಪ್ರಮುಖ ಆರೋಪಿಯ ಬಂಧನಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಪೊಲೀಸರಿಗೆ ಡೆಡ್ ಲೈನ್ ನೀಡಿದ್ದಾರೆ.
ಎರಡು ದಿನಗಳಲ್ಲಿ ಆರೋಪಿಯನ್ನು ಬಂಧಿಸಬೇಕು ಎಂದು ಗಡುವು ನೀಡಿದ್ದಾರೆ. ಇಲ್ಲವಾದಲ್ಲಿ ರಾಜ್ಯಾದ್ಯಂತ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಶನಿವಾರ ಜೆಡಿಎಸ್ ಶಾಸಕರು ಮತ್ತು ಮುಖಂಡರ ಸಭೆ ಕರೆದಿರುವ ಕುಮಾರಸ್ವಾಮಿ, ಹೋರಾಟದ ರೂಪುರೇಷೆ ಸಿದ್ಧಪಡಿಸಲು ಮುಂದಾಗಿದ್ದಾರೆ.
ಸ್ಟಿಂಗ್ ಆಪರೇಷನ್ ಪ್ರಕರಣದ ತನಿಖೆಗೆ ಆಗ್ರಹಿಸಿ ಅಕ್ಟೋಬರ್ 15ರಂದು ಹೆಚ್.ಡಿ. ಕುಮಾರಸ್ವಾಮಿ ಬೆಂಗಳೂರಿನ ಪೊಲೀಸ್ ಆಯುಕ್ತರ ಕಚೇರಿಗೆ ತೆರಳಿ ಧರಣಿ ನಡೆಸಿದ್ದರು. ಪ್ರಕರಣದ ಪ್ರಮುಖ ವ್ಯಕ್ತಿ ರಾಕೇಶ್ ಶೆಟ್ಟಿ ಎಂಬವರ ವಿರುದ್ಧ ಆರೋಪ ಮಾಡಿದ್ದರಲ್ಲದೇ, ಆತನನ್ನು ಬಂಧಿಸಬೇಕು ಎಂಬುದು ಆಗ್ರಹಿಸಿದ್ದರು. ತಮ್ಮನ್ನು ಮತ್ತು ಜೆಡಿಎಸ್ ಕಾರ್ಯಕರ್ತರನ್ನು ವಿಚಾರಣೆಗೆ ಒಳಪಡಿಸುವುದಕ್ಕೆ ಆಕ್ಷೇಪವಿಲ್ಲ, ಆದರೆ ಪ್ರಕರಣದ ಮೂಲ ವ್ಯಕ್ತಿಯ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದರು.
ಪೊಲೀಸ್ ಆಯುಕ್ತರು ಪ್ರಕರಣದಲ್ಲಿ ಶಾಮೀಲಾಗಿರುವ ಎಲ್ಲರನ್ನೂ ತನಿಖೆಗೆ ಒಳಪಡಿಸುವ ಭರವಸೆ ನೀಡಿದ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಧರಣಿ ಹಿಂಪಡೆದಿದ್ದರು. ಆದರೆ, ಪ್ರಮುಖ ಆರೋಪಿಯ ಬಂಧನವಾಗದಿದ್ದರೆ ಹೋರಾಟ ಮುಂದುವರಿಸುವುದಾಗಿ ಎಚ್ಚರಿಕೆ ನೀಡಿದ್ದರು.
ಸ್ಟಿಂಗ್ ಆಪರೇಷನ್ ಹಿಂದೆ ರಾಜಕೀಯ ಷಡ್ಯಂತ್ರವಿದೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ. ಸ್ಟಿಂಗ್ ನಡೆಸಿದ ವ್ಯಕ್ತಿಗಳಿಗೆ ಕಾಂಗ್ರೆಸ್ ಹೈಕಮಾಂಡ್ ಜೊತೆ ಸಂಪರ್ಕವಿದೆ ಮತ್ತು ಅವರಿಗೆ ರಕ್ಷಣೆ ನೀಡಲಾಗುತ್ತಿದೆ ಎಂಬ ಗಂಭೀರ ಆರೋಪವನ್ನೂ ಮಾಡಿದ್ದಾರೆ. ಈ ಸಂಬಂಧ ಬಾಗೇಪಲ್ಲಿ ಮೂಲದ ಪ್ರಶಾಂತ್ ಎಂಬ ವ್ಯಕ್ತಿಯ ಫೋಟೋವನ್ನು ಬಿಡುಗಡೆ ಮಾಡಿ, ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲಾ ಅವರೊಂದಿಗಿನ ಫೋಟೋವನ್ನು ಉಲ್ಲೇಖಿಸಿದ್ದಾರೆ. ಸ್ಟಿಂಗ್ ಆಪರೇಷನ್ ಮೂಲಕ ತಮ್ಮನ್ನು ಸಿಲುಕಿಸಲು ಪ್ರಯತ್ನಿಸಲಾಗುತ್ತಿದೆ ಎಂಬುದು ಕುಮಾರಸ್ವಾಮಿ ಅವರ ಆರೋಪವಾಗಿದೆ.
ಸ್ಟಿಂಗ್ ಆಪರೇಷನ್ ಪ್ರಕರಣದ ಪ್ರಮುಖ ಆರೋಪಿಯ ಬಂಧನಕ್ಕೆ ಕುಮಾರಸ್ವಾಮಿ ನೀಡಿರುವ ಗಡುವು ಮುಗಿಯುವ ಮುನ್ನವೇ ಜೆಡಿಎಸ್ನಲ್ಲಿ ಹೋರಾಟದ ಸಿದ್ಧತೆ ಆರಂಭವಾಗಿದೆ. ನಾಳೆ ನಡೆಯಲಿರುವ ಜೆಡಿಎಸ್ ಶಾಸಕರು ಮತ್ತು ಮುಖಂಡರ ಸಭೆಯಲ್ಲಿ ಮುಂದಿನ ಕಾರ್ಯತಂತ್ರದ ಬಗ್ಗೆ ಚರ್ಚೆ ನಡೆಯಲಿದೆ.
ಬಂಧನವಾಗದಿದ್ದರೆ ಯಾವ ರೀತಿಯಲ್ಲಿ ಹೋರಾಟ ನಡೆಸಬೇಕು, ರಾಜ್ಯಾದ್ಯಂತ ಪ್ರತಿಭಟನೆಗಳನ್ನು ಹೇಗೆ ಸಂಘಟಿಸಬೇಕು ಎಂಬ ಬಗ್ಗೆ ಸಭೆಯಲ್ಲಿ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.
ಸ್ಟಿಂಗ್ ಆಪರೇಷನ್ ಪ್ರಕರಣದ ಕುರಿತು ಅಕ್ಟೋಬರ್ 15ರಂದು ನಡೆದ ಸಚಿವ ಸಂಪುಟ ಸಭೆಯಲ್ಲೂ ಚರ್ಚೆ ನಡೆದಿದೆ. ಪ್ರತ್ಯೇಕ ಉನ್ನತ ಮಟ್ಟದ ತನಿಖೆ ನಡೆಸುವ ಬದಲು, ಈಗಾಗಲೇ ನಡೆಯುತ್ತಿರುವ ತನಿಖೆಯನ್ನೇ ಮುಂದುವರಿಸಲು ಸರ್ಕಾರ ನಿರ್ಧರಿಸಿದೆ. ಅಗತ್ಯ ದಾಖಲೆಗಳನ್ನು ಸಂಗ್ರಹಿಸಿ, ಅವುಗಳ ಆಧಾರದಲ್ಲಿ ಮುಂದಿನ ಕ್ರಮ ಕೈಗೊಳ್ಳುವ ನಿಲುವನ್ನು ಸರ್ಕಾರ ಹೊಂದಿದೆ ಎನ್ನಲಾಗಿದೆ.

