ಮೈಸೂರು: ರಾಜ್ಯ ರಾಜಕಾರಣದಲ್ಲಿ ಅಲ್ಲೋಲಕಲ್ಲೋಲವೆಬ್ಬಿಸಿರುವ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಅಬ್ಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಇದೇ ಮೊದಲ ಬಾರಿಗೆ ಸುದೀರ್ಘ ಪ್ರತಿಕ್ರಿಯೆ ನೀಡಿದ್ದಾರೆ. ಈ ವೇಳೆ ಕೆಲ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ.
ಮೈಸೂರಿನ ಸುತ್ತೂರು ಶಾಖಾ ಮಠದಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿದ್ದರಾಮಯ್ಯ, ಈ ವರ್ಷದ ಸೆಪ್ಟೆಂಬರ್ ತಿಂಗಳಲ್ಲಿ ಸ್ಟಿಂಗ್ ಆಪರೇಷನ್ ವಿಚಾರ ನನ್ನ ಗಮನಕ್ಕೆ ಬಂತು. ಒಬ್ಬ ಪತ್ರಕರ್ತ ಮತ್ತು ಮಂಗಳೂರಿನ ಕೃಪಾ ಆಳ್ವಾ ಸೇರಿಕೊಂಡು ಈ ಕೆಲಸ ಮಾಡಿದ್ದಾರೆ ಎಂದರು.
ಸ್ಟಿಂಗ್ ಆಪರೇಶನ್ ಪ್ರಕರಣದ ಬಗ್ಗೆ ಪಾರದರ್ಶಕ ತನಿಖೆಯಾಗಬೇಕು. ಜನರಿಗೆ ಸತ್ಯಾಂಶ ತಿಳಿಯಬೇಕು ಎನ್ನುವ ಉದ್ದೇಶದಿಂದ ನಾನೇ ಸ್ವಯಂಪ್ರೇರಿತವಾಗಿ ಪೊಲೀಸರಿಗೆ ದೂರು ನೀಡಿದ್ದೇನೆ. ಸ್ಟಿಂಗ್ ಆಪರೇಷನ್ ನಲ್ಲಿ ಯಾವುದೇ ಹುರುಳಿಲ್ಲ, ಸಂಪೂರ್ಣ ಸತ್ಯಕ್ಕೆ ದೂರವಾದ ಆರೋಪವಿದು ಎಂದು ತಿಳಿಸಿದರು.
ನಾನು ಎಂಟು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಇಂತಹ ಯಾವುದೇ ಕೃತ್ಯಗಳು ನಡೆದಿರಲಿಲ್ಲ. ನನ್ನ ಸುದೀರ್ಘ ರಾಜಕೀಯ ಜೀವನದಲ್ಲಿ ಇಂತಹ ಕೀಳು ಆರೋಪ ಬಂದೇ ಇರಲಿಲ್ಲ. ಈಗಿನ ರಾಜಕೀಯ ವ್ಯವಸ್ಥೆಯಲ್ಲಿ ಇಂತಹ ಬ್ಲಾಕ್‌ಮೇಲ್ ತಂತ್ರಗಳನ್ನು ಮಾಡುತ್ತಿದ್ದಾರೆ. ನಾನು ಯಾವುದೇ ತಪ್ಪು ಮಾಡಿಲ್ಲ. ತಪ್ಪು ಮಾಡದ ಮೇಲೆ ನನಗೆ ಯಾರ ನೈತಿಕ ಬೆಂಬಲವೂ ಬೇಕಾಗಿಲ್ಲ, ಯಾರೂ ನನ್ನ ಪರವಾಗಿ ನಿಲ್ಲಬೇಕಾದ ಅಗತ್ಯವೂ ಇಲ್ಲ ಎಂದು ಹೇಳಿದರು.
ರಾಜಕೀಯ ಲಾಭಕ್ಕಾಗಿ ಕೆಲವರು ಮಾತನಾಡುತ್ತಿದ್ದಾರೆ, ಮಾತನಾಡಿಕೊಳ್ಳಲಿ. ಈ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂಬುದು ತನಿಖೆಯಿಂದ ಹೊರಬರಬೇಕು. ಇದರ ಹಿಂದೆ ಸ್ವಪಕ್ಷದವರಿದ್ದಾರೋ ಅಥವಾ ವಿರೋಧ ಪಕ್ಷದವರಿದ್ದಾರೋ ಎಂಬುದು ತನಿಖೆಯ ನಂತರವೇ ತಿಳಿಯಲಿದೆ ಎಂದರು.
ನನಗೆ ಸರ್ಕಾರದ ತನಿಖೆ ಮೇಲೆ ಪೂರ್ಣ ನಂಬಿಕೆಯಿದೆ. ಇದಕ್ಕಾಗಿ ಎಸ್‌ಐಟಿ ಅಥವಾ ಬೇರೆ ಯಾವುದೇ ಉನ್ನತ ಮಟ್ಟದ ತನಿಖೆಯ ಅಗತ್ಯವಿಲ್ಲ. ಇಂತಹ ಷಡ್ಯಂತ್ರ ರೂಪಿಸಿದವರ ಉದ್ದೇಶ ಎಂದಿಗೂ ಸಫಲವಾಗುವುದಿಲ್ಲ ಎಂದು ಹೇಳಿದರು.
ಪ್ರಕರಣದ ಬಗ್ಗೆ ಪಾರದರ್ಶಕವಾಗಿ ತನಿಖೆ ಆಗಬೇಕು. ಸತ್ಯವೇನೆಂದು ಹೊರಬರಬೇಕು. ಇದರಲ್ಲಿ ಹುರುಳಿಲ್ಲ ಎಂಬುದು ಜನತೆಗೆ ತಿಳಿಯಬೇಕು ಎಂದು ಹೇಳಿದರು.
ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಪವಿತ್ರಾಗೌಡ ಅರ್ಜಿ ವಜಾಗೊಳಿಸಿದ ಕೋರ್ಟ್
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿ ಪವಿತ್ರಾ ಗೌಡ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ಕೋರ್ಟ್ ವಜಾಗೊಳಿಸಿದೆ. ಈ ಹಿನ್ನೆಲೆಯಲ್ಲಿ ಪವಿತ್ರಾ ಗೌಡಗೆ ನಿರಾಸೆಯಾಗಿದೆ.
ಪವಿತ್ರಾ ಗೌಡ ಅವರು ತಮ್ಮ ಬ್ಯಾರಕ್ ಬದಲಾವಣೆ ಕೋರಿ ಹಾಗೂ ನ್ಯಾಯಾಧೀಶರ ಖುದ್ದು ಪರಿಶೀಲನೆ ಮತ್ತು ವಿವಿಧ ಸೌಲಭ್ಯವನ್ನು ಕೋರಿ ಅರ್ಜಿ ಹಾಕಿದ್ದರು. ಅರ್ಜಿಯ ವಿಚಾರಣೆ ನಡೆಸಿದ್ದ 59ನೇ ಸಿಸಿಎಚ್ ನ್ಯಾಯಾಲಯ ಆದೇಶವನ್ನು ಇಂದಿಗೆ (ಅಕ್ಟೋಬರ್ 23)ಕ್ಕೆ ಕಾಯ್ದಿರಿಸಿತ್ತು. ಇಂದು ಆದೇಶ ಹೊರಬಿದ್ದಿದ್ದು ನ್ಯಾಯಾಧೀಶರು ಪವಿತ್ರಾ ಗೌಡ ಅರ್ಜಿಯನ್ನು ವಜಾ ಮಾಡಿದ್ದಾರೆ.
ತಮ್ಮ ಬ್ಯಾರಕ್ನಲ್ಲಿ ಇರುವ ನೈಜೀರಿಯನ್ ಮೂಲದ ಆರೋಪಿಗಳಿಂದ ಸಮಸ್ಯೆ ಆಗುತ್ತಿದೆ. ತಮ್ಮ ಉಡುಪುಗಳನ್ನು ಬೇರೆ ಆರೋಪಿಗಳು ಬಳಸುತ್ತಿದ್ದಾರೆ. ಪದೇ ಪದೇ ತಮಗೆ ತೊಂದರೆ ನೀಡುತ್ತಿದ್ದಾರೆ. ತಮಗೆ ಬ್ಯಾರಕ್ನಲ್ಲಿ ಇರುವುದಕ್ಕೆ ಆಗುತ್ತಿಲ್ಲ. ಇಲ್ಲಿ ಸಾಕಷ್ಟು ಸಮಸ್ಯೆಗಳು ಇವೆ. ನ್ಯಾಯಾಧೀಶರ ಸಮಿತಿಯೇ ಬಂದು ಇಲ್ಲಿನ ವ್ಯವಸ್ಥೆ ನೋಡುವಂತೆ ಪವಿತ್ರಾ ಗೌಡ ಕೋರಿದ್ದರು. ಜೊತೆಗೆ ತಮ್ಮ ಬ್ಯಾರಕ್ ಬದಲಾವಣೆಗೆ ಅನುಮತಿ ನೀಡಬೇಕು ಎಂದು ಅವರು ಕೋರಿದ್ದರು. ಅಲ್ಲದೇ ತನಗೆ ಪ್ರತ್ಯೇಕ ಆರೋಗ್ಯ ತಪಾಸಣೆಗೂ ಅನುಮತಿ ಕೋರಿದ್ದರು.
ವಿಚಾರಣೆ ಆಲಿಸಿದ್ದ 59ನೇ ಸಿಸಿಎಚ್ ನ್ಯಾಯಾಲಯದ ನ್ಯಾಯಾಧೀಶೆ ಸುಜಾತಾ ಮಡಿವಾಳಪ್ಪ ಸಾಂಬ್ರಾಣಿ, ಪವಿತ್ರಾ ಗೌಡ ಅವರ ಅರ್ಜಿಯನ್ನು ವಜಾಗೊಳಿಸಿದ್ದಾರೆ.
ಇದೇ ವೇಳೆ ಪ್ರಕರಣದ ಇತರ ಆರೋಪಿಗಳಾದ ಅನುಕುಮಾರ್, ಜಗದೀಶ್ ಸಹ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.

