HomeKarnatakaಸ್ಟಿಂಗ್ ಆಪರಮೇಷನ್ ಮೂಲಕ ಟ್ರ್ಯಾಪ್ ಮಾಡಲು ಯತ್ನ ನಡೆಯುತ್ತಿದೆ ಹುಷಾರಾಗಿರಿ! ಸಚಿವರಿಗೆ ಸಿಎಂ ಡಿ.ಕೆ.ಶಿವಕುಮಾರ್...

ಸ್ಟಿಂಗ್ ಆಪರಮೇಷನ್ ಮೂಲಕ ಟ್ರ್ಯಾಪ್ ಮಾಡಲು ಯತ್ನ ನಡೆಯುತ್ತಿದೆ ಹುಷಾರಾಗಿರಿ! ಸಚಿವರಿಗೆ ಸಿಎಂ ಡಿ.ಕೆ.ಶಿವಕುಮಾರ್ ಎಚ್ಚರಿಕೆ

ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಮತ್ತೆ ರಹಸ್ಯ ಕಾರ್ಯಾಚಾರಣೆ (ಸ್ಟಿಂಗ್ ಆಪರೇಷನ್) ಸದ್ದು ಮಾಡುತ್ತಿದೆ. ಖಾಸಗಿ ಏಜೆನ್ಸಿಗಳ ಮೂಲಕ ರಾಜ್ಯ ಸರ್ಕಾರದ ಸಚಿವರ ಮೇಲೆ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಸ್ಟಿಂಗ್ ಆಪರೇಷನ್ ನಡೆಸುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ಸಚಿವರ ಮೇಲೆ ಶ್ತಿಂಗ್ ಆಪರೇಷನ್ ನಡೆಯುತ್ತಿದೆ ಎಂಬ ಸ್ಫೋಟಕ ,ಮಾಹಿತಿ ನೀಡಿದ್ದಾರೆ. ಬಿಜೆಪಿ-ಜೆಡಿಎಸ್ ನಾಯಕರು ನಿಮ್ಮನ್ನೆಲ್ಲ ಟ್ರ್ಯಾಪ್ ಮಾಡಲು ಯತ್ನಿಸುತ್ತಿದ್ದಾರೆ. ಖಾಸಗಿ ಏಜೆನ್ಸಿ ಮೂಲಕ ಸ್ಟಿಂಗ್ ಆಪರೇಷನ್ ಮಾಡುತ್ತಿದ್ದಾರೆ. ಸಚಿವರೆಲ್ಲರೂ ಎಚ್ಚರದಿಂದ ಇರಿ ಎಂದು ವಾರ್ನಿಂಗ್ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗುಪ್ತಚರ ಇಲಾಖೆ ವರದಿ ಆಧರಿಸಿ, ಯಾರ್ಯಾರ ಮೇಲೆ ಕಣ್ಣಿಡಲಾಗಿದೆ ಎಂಬ ಪಟ್ಟಿ ನೀಡಿ ಸಚಿವರಿಗೆ ಹೈ ಅಲರ್ಟ್ ಆಗಿರುವಂತೆ ಸಿಎಂ ಸೂಚಿಸಿದರು. ಯಾರ್ಯಾರು ಏನು ಮಾಡುತ್ತಿದ್ದಾರೆ. ಏನು ಕೆಲಸದಲ್ಲಿದ್ದಾರೆ ಎಲ್ಲವನ್ನೂ ಏಜೆನ್ಸಿ ಮೂಲಕ ಗಮನಿಸುತ್ತಿದ್ದಾರೆ. ನಿಮ್ಮೆಲರ ಮೇಲೆ ನಿಗಾ ಇಡಲಾಗಿದೆ ಎಂದರು.

ನೀವು ಎಲ್ಲಿ ಹೋಗ್ತೀರಿ ಏನು ಮಾಡ್ತೀರಿ ಎಲ್ಲವನ್ನೂ ಫಾಲೋ ಮಾಡ್ತಿದ್ದಾರೆ. ಐವರು ಸಚಿವರ ಹೆಸರು ಹೇಳಿ ಈ ಬಗ್ಗೆ ಸಿಎಂ ಎಚ್ಚರಿಕೆ ನೀಡಿದ್ದಾರೆ. ಸಿಎಂ ಎಚ್ಚರಿಕೆ ಬೆನ್ನಲ್ಲೇ ಸಚಿವರುಗಳು ಥಂಡಾ ಹೊಡೆದಿದ್ದಾರೆ.

ರಾಜ್ಯ ಸರ್ಕಾರಕ್ಕೆ 2000 ರೂಪಾಯಿ ದಂಡ ವಿಧಿಸಿದ ಹೈಕೋರ್ಟ್: ಕಾರಣವೇನು?

ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ 2000 ರೂಪಾಯಿ ದಂಡ ವಿಧಿಸಿದೆ. ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ (ಪಿಐಎಲ್) ಗೆ ಸಂಬಂಧಿದ್ಸಿದ ವಿಚಾರಣೆ ವೇಳೆ ಹೈಕೋರ್ಟ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಗೆ ಪ್ರತಿಕ್ರಿಯಿಸಲು ರಾಜ್ಯ ಸರ್ಕಾರ ಪದೇ ಪದೇ ಕಾಲಾವಕಾಶ ಕೋರಿ ವಿಳಂಬ ನೀತಿ ಅನುಸರಿಸಿದ್ದಕ್ಕೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆಯಲ್ಲದೇ 2000 ರೂಪಯೈ ದಂಡ ವಿಧಿಸಿದೆ.

ಅನುದಾನ ಹಂಚಿಕೆಯಲ್ಲಿ ತಾರತಮ್ಯ ಆರೋಪಿಸಿ ಜಮಖಂಡಿ ಶಾಸಕ ಜಗದೀಶ್ ಗುಡಗುಂಟಿ ಸಲ್ಲಿಸಿದ್ದ ಪಿಐಎಲ್ ವಿಚಾರಣೆ ಸಂದರ್ಭದಲ್ಲಿ ಈ ಆದೇಶ ಹೊರಬಿದ್ದಿದೆ. ಅಕ್ಟೋಬರ್ 29, 2025 ರಿಂದಲೂ ಆಕ್ಷೇಪಣೆ ಸಲ್ಲಿಸಲು ಸರ್ಕಾರ ಕಾಲಾವಕಾಶ ಕೇಳುತ್ತಿರುವುದು ಹೈಕೋರ್ಟ್ ಅಸಮಾಧಾನಕ್ಕೆ ಕಾರಣವಾಗಿದೆ. ‘ಸುಮಾರು ಒಂದು ವರ್ಷದಿಂದಲೂ ಈ ವಿಳಂಬ ನೀತಿ ಮುಂದುವರಿದಿದೆ’ ಎಂದು ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಸರ್ಕಾರಕ್ಕೆ 2000 ರೂ ದಂಡ ವಿಧಿಸಿದ ನ್ಯಾಯಾಲಯ, ಮುಂದಿನ ಎರಡು ವಾರಗಳಲ್ಲಿ ಯಾವುದೇ ವಿಳಂಬವಿಲ್ಲದೆ ಆಕ್ಷೇಪಣೆಗಳನ್ನು ಸಲ್ಲಿಸುವಂತೆ ತಾಕೀತು ಮಾಡಿದೆ.

ಆಡಳಿತ ಪಕ್ಷದ ಶಾಸಕರಿಗೆ 50 ಕೋಟಿ ರೂಪಾಯಿ, ವಿರೋಧ ಪಕ್ಷದ ಶಾಸಕರಿಗೆ 25 ಕೋಟಿ ರೂಪಾಯಿ ಅನುದಾನ ನೀಡಿ ತಾರತಮ್ಯ ಮಾಡಲಾಗಿದೆ ಎಂದು ಪಿಐಎಲ್‌ನಲ್ಲಿ ಆರೋಪಿಸಲಾಗಿತ್ತು. ಅನುದಾನ ಹಂಚಿಕೆಯಲ್ಲಿನ ಸರ್ಕಾರದ ತಾರತಮ್ಯ ನೀತಿಯನ್ನು ಪ್ರಶ್ನಿಸಿದ್ದ ಈ ಅರ್ಜಿಗೆ ಸಮರ್ಪಕ ಪ್ರತಿಕ್ರಿಯೆ ನೀಡುವಲ್ಲಿ ಸರ್ಕಾರ ವಿಫಲವಾಗಿರುವುದಕ್ಕೆ ಹೈಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದೆ. ನ್ಯಾಯಾಲಯದ ಆದೇಶ ಪಾಲಿಸುವಂತೆ ಸರ್ಕಾರಕ್ಕೆನಿರ್ದೇಶನ ನೀಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular