HomeKarnatakaಬಾಗಲಕೋಟೆ ಕಲ್ಲು ತೂರಾಟ ಪ್ರಕರಣ; ಖಡಕ್ ಕ್ರಮಕ್ಕೆ ಸಿಎಂ ಸೂಚನೆ

ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ; ಖಡಕ್ ಕ್ರಮಕ್ಕೆ ಸಿಎಂ ಸೂಚನೆ

ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆಸಿದೆ. ಎಸ್‌ಪಿ ಸಿದ್ದಾರ್ಥ್ ಅವರ ಮೇಲೆ ಸಹ ಕಲ್ಲು ತೂರಾಟ ನಡೆಸಲಾಗಿದ್ದು, ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

ಈಗಾಗಲೇ ಘಟನೆ ಕುರಿತು ಇಬ್ಬರನ್ನು ಬಂಧಿಸಲಾಗಿದೆ. ಶುಕ್ರವಾರ ಮಧ್ಯಾಹ್ನ ಮತ್ತೆ ಕಲ್ಲು ತೂರಾಟ ನಡೆದಿದ್ದು, ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಸಿದ್ದರಾಮಯ್ಯ ಪ್ರತಿಕ್ರಿಯೆ: ಘಟನೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣದ ಪೋಸ್ಟ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ‘ಬಾಗಲಕೋಟೆಯಲ್ಲಿ ನಡೆದ ಕಲ್ಲುತೂರಾಟ ಘಟನೆಯು ಸಮಾಜದ ಶಾಂತಿ, ಸೌಹಾರ್ದತೆಗೆ ಮಾರಕ. ಇದನ್ನು ನಾನು ಮತ್ತು ನಮ್ಮ ಸರ್ಕಾರ ಬಲವಾಗಿ ಖಂಡಿಸುತ್ತದೆ’ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

‘ಘಟನೆಯ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳ ಬಳಿ ಚರ್ಚಿಸಿದ್ದು, ನಿಷ್ಪಕ್ಷಪಾತ ತನಿಖೆ ನಡೆಸಿ, ದುಷ್ಕೃತ್ಯ ಎಸಗಿದ ಪುಂಡರಿಗೆ ಕಾನೂನಿನ ಮೂಲಕ ತಕ್ಕ ಉತ್ತರ ನೀಡುವಂತೆ ಸೂಚನೆ ನೀಡಿದ್ದೇನೆ’ ಎಂದು ತಿಳಿಸಿದ್ದಾರೆ.

‘ಈಗಾಗಲೇ ಪ್ರಕರಣದ ಸಂಬಂಧ ಕೆಲವು ಆರೋಪಿಗಳನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಲಾಗುತ್ತಿದ್ದು, ಘಟನೆಗೆ ಕಾರಣರಾದ ಪ್ರತಿಯೊಬ್ಬರಿಗೂ ಶಿಕ್ಷೆ ನಿಶ್ಚಿತ. ನಾಡಿನ ಜನರಿಗೆ ಭಯಮುಕ್ತ ನೆಮ್ಮದಿಯ ಬದುಕು ನೀಡುವುದು ನಮ್ಮ‌ ಮೊದಲ ಆದ್ಯತೆ’ ಎಂದು ಭರವಸೆ ಕೊಟ್ಟಿದ್ದಾರೆ.

‘ಜನರ ಶಾಂತಿ – ನೆಮ್ಮದಿಗೆ ಭಂಗ ತರುವ ಯಾವುದೇ ವ್ಯಕ್ತಿ – ಶಕ್ತಿಗಳನ್ನು ನಾವು ಸಹಿಸುವುದಿಲ್ಲ. ಸಾರ್ವಜನಿಕರು ಯಾವುದೇ ಪ್ರಚೋದನೆಗಳಿಗೂ ಕಿವಿಗೊಡದೆ, ಸಂಯಮದಿಂದ ವರ್ತಿಸಿ. ಪೊಲೀಸ್ ಇಲಾಖೆ ತನ್ನ ಕರ್ತವ್ಯವನ್ನು ನಿಷ್ಪಕ್ಷಪಾತವಾಗಿ ಮಾಡಲಿದೆ’ ಎಂದು ತಿಳಿಸಿದ್ದಾರೆ.

ಅಂಗಡಿಗಳು ಬಂದ್: ಶುಕ್ರವಾರ ಮಧ್ಯಾಹ್ನದ ಕಲ್ಲು ತೂರಾಟ ಪ್ರಕರಣದ ಬಳಿಕ ಬಾಗಲಕೋಟೆ ನಗರದ ಹಲವು ಕಡೆ ಜನರು ಸ್ವಯಂ ಪ್ರೇರಿತವಾಗಿ ಅಂಗಡಿಗಳನ್ನು ಮುಚ್ಚುತ್ತಿದ್ದಾರೆ.

ಎಸ್‌ಪಿ ಸಿದ್ದಾರ್ಥ್ ಲಾಠಿ ಹಿಡಿದು ಪರಿಸ್ಥಿತಿ ಹತೋಟಿಗೆ ತರುತ್ತಿದ್ದಾರೆ. ಕಲ್ಲು ತೂರಾಟ ಮಾಡುವವರ ಮೇಲೆ ಲಾಠಿ ಚಾರ್ಜ್ ಮಾಡುತ್ತಿದ್ದಾರೆ. ಹಣ್ಣಿನ ಅಂಗಡಿ, ತರಕಾರಿ ಅಂಗಡಿಗಳನ್ನು ಬಂದ್ ಮಾಡಿಕೊಂಡು ಜನರು ಮನೆಗಳತ್ತ ತೆರಳುತ್ತಿದ್ದಾರೆ.

ಬಾಗಲಕೋಟೆ ಘಟನೆ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಾಕಿದ್ದು, ‘ಹಿಂದೂ ವಿರೋಧಿ ಕಾಂಗ್ರೆಸ್‌ ಸರ್ಕಾರದ ಆಡಳಿತದಲ್ಲಿ ಹಿಂದೂ ಧಾರ್ಮಿಕ ಆಚರಣೆಗಳಿಗೆ ನಿಷೇಧ ಹೇರಲಾಗಿದೆಯೇ ಎನ್ನುವ ಅನುಮಾನ ರಾಜ್ಯದ ಜನತೆಯನ್ನು ಕಾಡುತ್ತಿದೆ’ ಎಂದು ಹೇಳಿದ್ದಾರೆ.

  • ಗಣೇಶ ಮೆರವಣಿಗೆಗೂ ಕಲ್ಲು ತೂರಾಟ
  • ಹನುಮ ಮಾಲಾಧಾರಿಗಳ ಮೇಲೂ ಕಲ್ಲುತೂರಾಟ
  • ನವರಾತ್ರಿ ಮೆರವಣಿಗೆಗೂ ಅಡ್ಡಿ
  • ಅಯ್ಯಪ್ಪ ಮಾಲಾಧಾರಿಗಳಿಗೂ ಆಕ್ಷೇಪ
  • ಓಂ ಶಕ್ತಿ ಪೀಠದ ಪಲ್ಲಕ್ಕಿ ಮೆರವಣಿಗೆ ಮೇಲೂ ಕಲ್ಲೆಸೆತ
  • ಈಗ ಬಾಗಲಕೋಟೆಯಲ್ಲಿ ಶಿವಾಜಿ ಮೆರವಣಿಗೆಯಲ್ಲೂ ಮತಾಂಧ ಪುಂಡರು ಕಲ್ಲೆಸೆದಿದ್ದಾರೆ.

‘ಹಿಂದೂ ವಿರೋಧಿ ಸಿದ್ದರಾಮಯ್ಯ ಸರ್ಕಾರವು ತನ್ನ ಅಧೀನದಲ್ಲಿ ಕಲ್ಲೆಸೆಯುವ ಇಲಾಖೆ ತೆರೆದು ಅದರ ಮೂಲಕ ಮತಾಂಧ ಪುಡಾರಿಗಳಿಗೆ ಗೌರವಧನ ನೀಡುತ್ತಿದೆಯೇ? ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರಿಗೆ ಬಾಗಲಕೋಟೆಯ ಘಟನೆ ಬಗ್ಗೆ ಏನಾದರೂ ಮಾಹಿತಿ ತಲುಪಿದೆಯೋ? ಅಥವಾ ಇನ್ನೂ “ಗೊತ್ತಿಲ್ಲ”ವೋ?’ ಎಂದು ಅಶೋಕ್ ಪ್ರಶ್ನೆ ಮಾಡಿದ್ದಾರೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular