ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಮುರ್ಡೇಶ್ವರದ ಬೈಲೂರಿನಲ್ಲಿ ಹಿಂದೂಗಳ ಐದಾರು ಮನೆಗಳ ಮೇಲೆ ಅನ್ಯಧರ್ಮೀಯ ಯುವಕರು ಸೋಮವಾರ ರಾತ್ರಿ ಕಲ್ಲು ತೂರಾಟ ನಡೆಸಿದ್ದಾರೆ. ಈ ವೇಳೆ ಇಬ್ಬರು ಆರೋಪಿಗಳನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದು, ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.
ಸೋಮವಾರ ರಾತ್ರಿ 10 ಗಂಟೆಯ ನಂತರ ಬೈಲೂರು ಮಾರ್ಗದ ತೆಂಗಾರ್ ರಸ್ತೆಯಲ್ಲಿ 3 ಬೈಕ್ ನಲ್ಲಿ ಬಂದ ಆರು ಜನ ಅನ್ಯಧರ್ಮೀಯ ಯುವಕರು ಬೈಲೂರಿನ ಹಿಂದೂಗಳ ಮನೆಗಳ ಮೇಲೆ ಕಲ್ಲುತೂರಾಟ ನಡೆಸಿದ್ದಾರೆ. ಸ್ಥಳೀಯರು ಇಬ್ಬರನ್ನು ಹಿಡಿದು ಮುರ್ಡೇಶ್ವರ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಉಳಿದ ನಾಲ್ವರು ಸ್ಥಳದಿಂದ ಪರಾರಿಯಾಗಿದ್ದು, ನಂತರ ಪೊಲೀಸರು ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಪೊಲೀಸ್ ಠಾಣೆ ಬಳಿ ಸೇರಿದ ಗ್ರಾಮಸ್ಥರು ಪ್ರತಿಭಟನೆ ನಡೆಸಿ ಕ್ರಮಕ್ಕೆ ಒತ್ತಾಯಿಸಿದ್ದಾರೆ.

