ಹಾಸನ: ಹಾಸನ ತಾಲೂಕಿನ ರಾಯಪುರ ಬಳಿ ಬಾರ್ ಮುಂದೆ ಪ್ರತಿಭಟನೆ ವೇಳೆ ಕಲ್ಲು ತೂರಾಟ ನಡೆದಿದ್ದು, ಪೊಲೀಸ್ ಗಾಯಗೊಂಡಿದ್ದಾರೆ.
ರಾಯಪುರದ ಲಕ್ಷ್ಮಿ ವೆಂಕಟೇಶ್ವರ ಬಾರ್ ಸಮೀಪ ಕಾರ್ ನೊಳಗೆ ವ್ಯಕ್ತಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ವೀರಾಪುರದ ದೊರೆಸ್ವಾಮಿ(42) ಮೃತಪಟ್ಟವರು. ಕಾರ್ ನಲ್ಲಿ ಅವರ ಶವ ಪತ್ತೆಯಾಗಿದ್ದು, ಬಾರ್ ಎದುರು ಕೊಲೆ ಮಾಡಲಾಗಿದೆ ಎಂದು ಸಂಬಂಧಿಕರು ಪ್ರತಿಭಟನೆ ನಡೆಸಿದ್ದಾರೆ.
ಬಾರ್ ಮುಂದೆ ಶವ ಇಟ್ಟು ಪ್ರತಿಭಟನೆ ನಡೆಸಿದ್ದು, ರಸ್ತೆ ತಡೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಸ್ತೆ ತಡೆ ನಡೆಸಿ ಪ್ರತಿಭಟಿಸಿದ್ದರಿಂದ ಪ್ರತಿಭಟನೆ ವಿಕೋಪಕ್ಕೆ ತಿರುಗಿದೆ. ಈ ವೇಳೆ ಕೆಲವರು ಕಲ್ಲು ತೂರಾಟ ನಡೆಸಿದ್ದು, ಈ ವೇಳೆ ಪೊಲೀಸರು ಲಘು ಲಾಠಿ ಪ್ರಹಾರ ಮಾಡಿ ಗುಂಪು ಚದುರಿಸಿದ್ದಾರೆ. ಕಲ್ಲು ತೂರಾಟದಲ್ಲಿ ಹಾಸನ ಡಿವೈಎಸ್ಪಿ ಗಂಗಾಧರಪ್ಪ, ಗ್ರಾಮಾಂತರ ಠಾಣೆ ಎಸ್ಐ ಕುಮಾರ್ ಹಾಗೂ ಕಾನ್ಸ್ಟೇಬನ್ ಗಳಾದ ಜಮಾಲುದ್ದೀನ್ ಮತ್ತು ಕುಮಾರ್ ಎಂಬುವರಿಗೆ ಗಾಯಗಳಾಗಿವೆ.

