HomeKarnatakaBREAKING: ದಾವಣಗೆರೆಯಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ: ಬಿಗುವಿನ ವಾತಾವರಣ

BREAKING: ದಾವಣಗೆರೆಯಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ: ಬಿಗುವಿನ ವಾತಾವರಣ

ದಾವಣಗೆರೆ: ದಾವಣಗೆರೆಯಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲುತೂರಾಟ ನಡೆದಿದೆ. ಬೇತೂರು ರಸ್ತೆಯ ಗಣೇಶ ವಿಸರ್ಜನೆ ಮೆರವಣಿಗೆ ಸಂದರ್ಭದಲ್ಲಿ ಘಟನೆ ನಡೆದಿದೆ.

ದಾವಣಗೆರೆ ನಗರದ ಶಾಂತಿ ಟಾಕೀಸ್ ರಸ್ತೆಯಲ್ಲಿ ಕಲ್ಲು ತೂರಾಟ ನಡೆಸಲಾಗಿದ್ದು, ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ. ಕಲ್ಲು ತೂರಿದ ಕಿಡಿಗೇಡಿಗಳನ್ನು ಪೊಲೀಸರು ಚದುರಿಸಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿದೆ. ಎಸ್‌ಪಿ ಉಮಾ ಪ್ರಶಾಂತ್ ನೇತೃತ್ವದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಗಣಪತಿ ಮೆರವಣಿಗೆ ಸಾಗುವಾಗ ಕಿಡಿಗೇಡಿಗಳು ಕಲ್ಲು ತೂರಿದ್ದು, ಭದ್ರತೆಯಲ್ಲಿದ್ದ ಪೊಲೀಸರು ತಕ್ಷಣವೇ ಕ್ರಮ ಕೈಗೊಂಡಿದ್ದಾರೆ. ಕಲ್ಲು ತೂರಾಟದಲ್ಲಿ ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular