ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಶಿಕಾರಿಪುರದ ಗಗ್ರಿ ಪ್ರದೇಶದಲ್ಲಿ ರಂಜಾನ್ ಹಬ್ಬಕ್ಕೆ ದೇಣಿಗೆ ಸಂಗ್ರಹಿಸುವ ವಿಚಾರವಾಗಿ ಮುಸ್ಲಿಂ ಸಮುದಾಯದ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ ನಡೆದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ 10 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ರಂಜಾನ್ ಹಬ್ಬಕ್ಕೆ ಪ್ರತಿ ಕುಟುಂಬ ಒಂದು ಸಾವಿರ ರೂ. ದೇಣಿಗೆ ನೀಡಬೇಕು ಎಂದು ಮಸೀದಿಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಮತ್ತೊಂದು ಗುಂಪು ಇದಕ್ಕೆ ವಿರೋಧ ವ್ಯಕ್ತಪಡಿಸಿದೆ. ಈ ವೇಳೆ ಪರಸ್ಪರ ಮಾತಿನ ಚಕಮತಿ ನಡೆದು ಕಲ್ಲು ತೂರಾಟ ಆರಂಭವಾಗಿದೆ.
ಶಿಕಾರಿಪುರ -ಶಿರಾಳಕೊಪ್ಪ ಮುಖ್ಯ ರಸ್ತೆಯಲ್ಲಿ ಎರಡು ಗುಂಪುಗಳು ಕಲ್ಲು, ಕೋಲು ಸೇರಿದಂತೆ ಕೈಗೆ ಸಿಕ್ಕ ವಸ್ತುಗಳನ್ನು ಎಸೆದಿದ್ದಾರೆ. ಈ ವೇಳೆ ಕೆಲಕಾಲ ಸಂಚಾರ ಸ್ಥಗಿತಗೊಂಡಿತ್ತು. ಶಿಕಾರಿಪುರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ 10 ಮಂದಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

