HomeKarnatakaBREAKING: ಪ್ರಚಾರದ ವೇಳೆ ಕಾಂಗ್ರೆಸ್ ನಾಯಕ ಪರಮೇಶ್ವರ್ ಮೇಲೆ ಕಲ್ಲು ತೂರಾಟ: ತಲೆಗೆ ಗಾಯವಾಗಿ ರಕ್ತ...

BREAKING: ಪ್ರಚಾರದ ವೇಳೆ ಕಾಂಗ್ರೆಸ್ ನಾಯಕ ಪರಮೇಶ್ವರ್ ಮೇಲೆ ಕಲ್ಲು ತೂರಾಟ: ತಲೆಗೆ ಗಾಯವಾಗಿ ರಕ್ತ ಸೋರಿಕೆ

ತುಮಕೂರು: ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಭೈರೇನಹಳ್ಳಿಯಲ್ಲಿ ಮಾಜಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ.

ಕಲ್ಲೇಟು ಬಿದ್ದು ಕಾಂಗ್ರೆಸ್ ಅಭ್ಯರ್ಥಿ ಪರಮೇಶ್ವರ್ ಅವರ ತಲೆಗೆ ಗಾಯವಾಗಿ ರಕ್ತ ಸೋರಿಕೆಯಾಗಿದೆ. ಚುನಾವಣೆ ಪ್ರಚಾರಕ್ಕೆ ತೆರಳಿದ್ದ ವೇಳೆಯಲ್ಲಿ ಘಟನೆ ನಡೆದಿದೆ. ತಲೆಗೆ ಕಲ್ಲೇಟು ಬಿದ್ದು ತೀವ್ರ ರಕ್ತಸ್ರಾವವಾಗಿದ್ದು, ಪರಮೇಶ್ವರ್ ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪರಮೇಶ್ವರ್ ಅವರನ್ನು ಕಾರ್ಯಕರ್ತರು ಎತ್ತಿಕೊಂಡು ಕುಣಿಯುತ್ತಿದ್ದ ಸಂದರ್ಭದಲ್ಲಿ ಹೂವು ಎಸೆಯಲಾಗಿದೆ. ಈ ವೇಳೆ ಗುಂಪಿನಲ್ಲಿದ್ದ ದುಷ್ಕರ್ಮಿ ಕಲ್ಲೆಸೆದಿದ್ದಾನೆ. ಕಲ್ಲು ಬಿದ್ದ ಕೂಡಲೇ ಪರಮೇಶ್ವರ ತಲೆ ಹಿಡಿದುಕೊಂಡಿದ್ದಾರೆ. ತಲೆಗೆ ಪೆಟ್ಟು ಬಿದ್ದು ಗಾಯವಾಗಿ ರಕ್ತ ಸೋರಿಕೆಯಾಗಿದ್ದು, ಅವರನ್ನು ಅಕ್ಕಿರಾಂಪುರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಕೊರಟಗೆರೆ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯರು ಕೂಡ ದುಷ್ಕರ್ಮಿ ಪತ್ತೆಗೆ ಮುಂದಾಗಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular