HomeKarnatakaBIG NEWS : ಬೆಂಗಳೂರಿನಲ್ಲಿ 'ವಂದೇ ಭಾರತ್' ರೈಲಿನ ಮೇಲೆ ಕಲ್ಲು ತೂರಾಟ ;...

BIG NEWS : ಬೆಂಗಳೂರಿನಲ್ಲಿ ‘ವಂದೇ ಭಾರತ್’ ರೈಲಿನ ಮೇಲೆ ಕಲ್ಲು ತೂರಾಟ ; 50 ಮಂದಿ ಅರೆಸ್ಟ್..!

ಬೆಂಗಳೂರು : ವಂದೇ ಭಾರತ್ ರೈಲಿನ ಮೇಲೆ ಕಲ್ಲು ತೂರಾಟ ನಡೆಸಿದ 50 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ನೈರುತ್ಯ ರೈಲ್ವೆ ಮೂಲಕ ಹಾದು ಹೋಗುವ ವಂದೇ ಭಾರತ್ ರೈಲುಗಳ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರು. ಅಂತಹವರನ್ನು ಪೊಲೀಸರು ಬಂಧಿಸಿದ್ದಾರೆ. ಇದುವರೆಗೆ 50 ಬಾರಿ ಕಲ್ಲು ಎಸೆದ ಪ್ರಕರಣಗಳು ವರದಿ ಆಗಿದ್ದು, ತನಿಖೆ ನಡೆಸಿರುವ ರೈಲ್ವೇ ಪೊಲೀಸರು 50 ಮಂದಿಯನ್ನು ಬಂಧಿಸಿದ್ದಾರೆ.

ದುಷ್ಕರ್ಮಿಗಳು ಪ್ರತಿನಿತ್ಯ ಚಲಿಸುತ್ತಿರುವ ರೈಲಿಗೆ ಕಲ್ಲು ಹೊಡೆಯುವ ಕೆಟ್ಟ ಅಭ್ಯಾಸ ಬೆಳೆಸಿಕೊಂಡಿದ್ದರು. ರೈಲುಗಳ ಮೇಲೆ ಕಲ್ಲು ತೂರಾಟ ನಡೆಸುವುದು ಕ್ರಿಮಿನಲ್ ಅಪರಾಧವಾಗಿದೆ. ರೈಲ್ವೇ ಕಾಯ್ದೆ ಸೆಕ್ಷನ್ 153ರ ಅಡಿಯಲ್ಲಿ 5 ವರ್ಷಗಳವರೆಗೆ ಜೈಲು ಶಿಕ್ಷೆಯನ್ನು ವಿಧಿಸಬಹುದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular