HomeLatest Newsಬೆಂಗಳೂರಿನಲ್ಲಿ ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಾಟ: ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ

ಬೆಂಗಳೂರಿನಲ್ಲಿ ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಾಟ: ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ

ಬೆಂಗಳೂರು: ಓಂ ಶಕ್ತಿ ಮಾಲಾಧಾರಿಗಳ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ಘಟನೆ ಬೆಂಗಳೂರಿನ ಚಾಮರಾಜಪೇಟೆ ಸಮೀಪದ ಜಗಜೀವನ್ ರಾಮ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಸ್ಥಳದಲ್ಲಿ ಕೆಲ ಕಾಲ ಉದ್ವಿಗ್ನ ಸ್ಥಿತಿ ಉಂಟಾಗಿತ್ತು.

 ಜೆಜೆ ನಗರದ ವಿಎಸ್ ಗಾರ್ಡನ್ ಓಂ ಶಕ್ತಿ ದೇವಾಲಯದ ಬಳಿ ಭಾನುವಾರ ರಾತ್ರಿ 8 ಗಂಟೆ ಸುಮಾರಿಗೆ ಘಟನೆ ನಡೆದಿದೆ. ವರದರಾಜು ಎಂಬುವರ ಅಪ್ರಾಪ್ತ ಪುತ್ರಿಯ ತಲೆಗೆ ಗಂಭೀರ ಗಾಯವಾಗಿದೆ. ಮತ್ತೊಬ್ಬ ಬಾಲಕಿ ಹಾಗೂ ಮಹಿಳೆಗೂ ಗಾಯಗಳಾಗಿವೆ ಎನ್ನಲಾಗಿದ್ದು, ಮಾಹಿತಿ ತಿಳಿದ ಜೆಜೆ ನಗರ ಠಾಣೆ ಪೊಲೀಸರು ಮತ್ತು ಎಸಿಪಿ ಭರತ್ ರೆಡ್ಡಿ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಘಟನೆಯಿಂದ ಆಕ್ರೋಶಗೊಂಡ ಓಂಶಕ್ತಿ ಮಾಲಾಧಾರಿಗಳು ಹಾಗೂ ಸ್ಥಳೀಯರು ಜೆಜೆ ನಗರ ಠಾಣೆ ಮುಂದೆ ಪ್ರತಿಭಟನೆ ನಡೆಸಿ ಕಲ್ಲು ತೂರಾಟ ನಡೆಸಿದ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಮುಂಜಾಗ್ರತೆ ಕ್ರಮವಾಗಿ ಪ್ರದೇಶದಲ್ಲಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಹಿಂದೆಯೂ ಅನ್ಯಕೋಮಿನವರು ಕಲ್ಲುತೂರಾಟ ನಡೆಸಿದ್ದರು. ಇತ್ತೀಚೆಗೆ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ಭಜನೆ ಮಾಡುವಾಗ ವಾಟರ್ ಬಾಟಲ್ ಗಳನ್ನು ತೂರಿದ್ದರು. ಈ ರೀತಿ ಹಲವು ಬಾರಿ ಘಟನೆಗಳು ನಡೆದಿದ್ದು, ಪೊಲೀಸರು ಕ್ರಮ ಕೈಗೊಂಡಿಲ್ಲ. ಈಗ ಮತ್ತೆ ಕಲ್ಲು ತೂರಾಟದಿಂದ ಮೂವರಿಗೆ ಗಾಯವಾಗಿದ್ದು, ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಅನ್ಯ ಕೋಮುವಿನ ಏರಿಯಾದಿಂದ ಕಲ್ಲುಗಳು ತೂರಿ ಬಂದಿವೆ. ಕಲ್ಲು ಎಸೆದವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular