ರಾಯಗಢ: ಆಘಾತಕಾರಿ ಘಟನೆಯೊಂದರಲ್ಲಿ ವಿಶಾಖಪಟ್ಟಣಂ-ರಾಯಗಡ ವಂದೇ ಭಾರತ್ ರೈಲಿನ ಮೇಲೆ ಕೆಲವು ಅಪರಿಚಿತ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ರಾಯಗಡ ಜಿಲ್ಲೆಯ ಲಾಡಾ ನಿಲ್ದಾಣದಲ್ಲಿ ಕಲ್ಲು ತೂರಾಟ ನಡೆದಿದೆ.
ಮಾಹಿತಿಯ ಪ್ರಕಾರ, ವಂದೇ ಭಾರತ್ ರೈಲು ಲಾಡಾ ನಿಲ್ದಾಣವನ್ನು ತಲುಪಿದಾಗ, ಕೆಲವು ಅಪರಿಚಿತ ವ್ಯಕ್ತಿಗಳು ಅದರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಪರಿಣಾಮವಾಗಿ, ಕಿಟಕಿಗಳ ಗಾಜು ಒಡೆದಿದೆ.
ದುಷ್ಕರ್ಮಿಗಳನ್ನು ಗುರುತಿಸಲು ತನಿಖೆ ನಡೆಯುತ್ತಿದೆ. ರೈಲ್ವೆ ಪೊಲೀಸ್ ಪಡೆ (ಆರ್‌ಪಿಎಫ್) ಈ ವಿಷಯದ ಬಗ್ಗೆ ತನಿಖೆ ನಡೆಸುತ್ತಿದೆ. ಇಂತಹ ಘಟನೆ ನಡೆದಿರುವುದು ಇದೇ ಮೊದಲಲ್ಲ. ಈ ಹಿಂದೆಯೂ ಒಡಿಶಾ ಸೇರಿ ದೇಶದ ಹಲವೆಡೆ ವಂದೇ ಭಾರತ್ ರೈಲುಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿತ್ತು.