ಭೂಕಂಪದ 4 ಗಂಟೆಗಳ ನಂತರ 5 ಅಂತಸ್ತಿನ ಕಟ್ಟಡ ಕುಸಿದು ಮೂವರ ಸಾವು, ಅವಶೇಷಗಳಡಿ ಸಿಲುಕಿದವರ ರಕ್ಷಣೆಗೆ ಕಾರ್ಯಾಚರಣೆ

ಲಖ್ನೋ: ಉತ್ತರ ಭಾರತದಲ್ಲಿ ಭೂಕಂಪ ಸಂಭವಿಸಿದ ನಾಲ್ಕು ಗಂಟೆಗಳ ನಂತರ ಅಪಾರ್ಟ್‌ಮೆಂಟ್ ಬ್ಲಾಕ್ ಕುಸಿದು ಮೂವರು ಮೃತಪಟ್ಟಿದ್ದಾರೆ. ಹಲವಾರು ಜನ ಅವಶೇಷಗಳಡಿ ಸಿಲುಕಿಕೊಂಡಿದ್ದಾರೆ.

ಲಕ್ನೋದ ಹಜರತ್‌ ಗಂಜ್ ಪ್ರದೇಶದ ವಜೀರ್ ಹಸನ್ ರಸ್ತೆಯಲ್ಲಿ ಕಟ್ಟಡ ಕುಸಿತ ಸಂಭವಿಸಿದೆ. ಅಲಯಾ ಅಪಾರ್ಟ್‌ ಮೆಂಟ್ ಹೆಸರಿನ ಕಟ್ಟಡವು ಇಂದು ಮಧ್ಯಾಹ್ನದ ಭೂಕಂಪದ ನಂತರ ಕುಸಿದಿದೆ. ಕಟ್ಟಡ ಕುಸಿತದಿಂದ ಸ್ಥಳದಲ್ಲಿ ಆತಂಕ ಮನೆ ಮಾಡಿದೆ. ಕಂಪನದಿಂದಾಗಿ ಅಪಾರ್ಟ್‌ಮೆಂಟ್ ಬ್ಲಾಕ್ ಕುಸಿದಿದೆ ಎನ್ನಲಾಗಿದೆ.

ಕಟ್ಟಡವು ಹಠಾತ್ ಕುಸಿದಿದೆ ಎಂದು ನಂಬಲಾಗಿದೆ. ಮೂರು ಮೃತದೇಹಗಳನ್ನು ಪತ್ತೆ ಮಾಡಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಗಾಯಾಳುಗಳನ್ನು ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಯುಪಿ ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಹೇಳಿದ್ದಾರೆ.

ಸ್ಥಳದಲ್ಲಿ ಎನ್‌ಡಿಆರ್‌ಎಫ್, ಪೊಲೀಸ್ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಇದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read