ವಿಶ್ವವಿದ್ಯಾಲಯಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ಗುಡ್ ನ್ಯೂಸ್ ನೀಡಿದೆ. ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರಾಧ್ಯಾಪಕರಾಗಲು ಪಿಹೆಚ್.ಡಿ. ಕಡ್ಡಾಯಗೊಳಿಸಿ ಹೊರಡಿಸಲಾಗಿದ್ದ ನಿಯಮವನ್ನು ರದ್ದುಗೊಳಿಸಲಾಗಿದೆ.
ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇರ ನೇಮಕಾತಿಗೆ ಪಿಎಚ್.ಡಿ. ಪೂರ್ಣವಾಗದಿದ್ದರೂ ಸಹ ನೆಟ್ (ಎನ್ ಇ ಟಿ), ಸೆಟ್ (ಎಸ್ ಇ ಟಿ) ಅಥವಾ ಸ್ಲೆಟ್ (ಎಸ್‌ಎಲ್‌ಇಟಿ) ಪೈಕಿ ಯಾವುದಾದರೂ ಒಂದು ಪ್ರವೇಶ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದರೆ ಅರ್ಹತೆ ಪಡೆಯಬಹುದು ಎಂದು ತಿಳಿಸಲಾಗಿದೆ.
ವಿಶ್ವವಿದ್ಯಾಲಯ ಧನಸಹಾಯ ಆಯೋಗದ ತೀರ್ಮಾನದ ಕುರಿತಂತೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅಧ್ಯಕ್ಷ ಜಗದೀಶ್ ಕುಮಾರ್, ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಕುರಿತಂತೆ ಕೆಲವೊಂದು ಬದಲಾವಣೆಗಳನ್ನು ಮಾಡಲಾಗಿದ್ದು, 2023ರ ಜುಲೈ 1 ರಿಂದಲೇ ಹೊಸ ನಿಯಮ ಜಾರಿಗೆ ಬಂದಿದೆ ಎಂದು ತಿಳಿಸಿದ್ದಾರೆ.
https://twitter.com/mamidala90/status/1676440794784313344?ref_src=twsrc%5Etfw%7Ctwcamp%5Etweetembed%7Ctwterm%5E1676440794784313344%7Ctwgr%5E163026e3c469b199defffa6d09d7499c6ee6a05c%7Ctwcon%5Es1_&ref_url=https%3A%2F%2Findianexpress.com%2Farticle%2Feducation%2Fnet-set-or-slet-mandatory-for-direct-recruitment-to-assistant-professor-post-ugc-8756537%2F