Video: ನನಗೆ ಲೈಂಗಿಕ ಕಿರುಕಳ ನೀಡಲಾಗಿದೆ ಎಂದ ಯುವತಿ; ಮೊದಲು ಅಶ್ಲೀಲ ವಿಡಿಯೋ ಮಾಡುವುದನ್ನು ನಿಲ್ಲಿಸು ಎಂದ ನೆಟ್ಟಿಗರು…!

ಸೋಶಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ ಒಬ್ಬರು, ಪಾರ್ಕಿನಲ್ಲಿ ನಾನು ಇದ್ದ ವೇಳೆ ಯುವಕನೊಬ್ಬ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಹೇಳಿದ್ದು, ಪೊಲೀಸರಿಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದು ಆರೋಪಿಸಿದ್ದಾರೆ. ಆದರೆ ಆಕೆ ತನ್ನ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಸಾಕಷ್ಟು ಅಶ್ಲೀಲ ವಿಡಿಯೋಗಳನ್ನು ಹಾಕಿದ್ದು, ಮೊದಲು ಇದನ್ನು ನಿಲ್ಲಿಸು ಎಂದು ನೆಟ್ಟಿಗರು ಹೇಳಿದ್ದಾರೆ.

ಈ ಘಟನೆ ನೋಯ್ಡಾದ ಕೊತ್ವಾಲಿ ಪೊಲೀಸ್ ಠಾಣೆ ಸೆಕ್ಟರ್ 49ರ ವ್ಯಾಪ್ತಿಯಲ್ಲಿ ನಡೆದಿದ್ದು, ಅನ್ವೇಷಾ ಡೇ ಎಂಬ ಈ ಯುವತಿ ಸಮೀಪದ ಪಾರ್ಕಿಗೆ ತೆರಳಿ ಮಳೆ ನೀರಿನಲ್ಲಿ ಸಂಭ್ರಮಿಸುತ್ತಿದ್ದರು. ಈ ವೇಳೆ ಅಲ್ಲಿಗೆ ಬಂದ ಯುವಕ ಆಕೆಯ ಮೈ ಮೇಲೆ ಕೈ ಹಾಕಿದ್ದಲ್ಲದೆ ಪ್ರತಿರೋಧ ತೋರಿದಾಗ ಹಲ್ಲೆ ಕೂಡ ನಡೆಸಿದ್ದಾನೆ. ಅದೇ ಸಂದರ್ಭದಲ್ಲಿ ಇನ್ನಿಬ್ಬರು ಯುವತಿಯರು ಅಲ್ಲಿಗೆ ಬಂದಿದ್ದು, ಅವರನ್ನು ನೋಡಿ ಆರೋಪಿ ಪರಾರಿಯಾಗಿದ್ದಾನೆ.

ಅನ್ವೇಷಾ ಕೂಡಲೇ ಸಮೀಪದ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದರೂ ಅವರುಗಳು ನಿರ್ಲಕ್ಷ್ಯ ತೋರಿದರು ಎಂದು ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಅನುಯಾಯಿಗಳನ್ನು ಹೊಂದಿರುವ ಅನ್ವೇಷಾ, ಪ್ರಚಾರಕ್ಕಾಗಿ ಈ ರೀತಿ ಮಾಡುತ್ತಿದ್ದಾರೆ ಎಂದು ಹಲವರು ಆರೋಪಿಸಿದ್ದಾರೆ. ಈ ಹಿಂದೆಯೂ ಕೂಡ ಆಕೆ ತನ್ನ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಅಶ್ಲೀಲ ವಿಡಿಯೋಗಳನ್ನು ಹಾಕಿ ಲೈಕ್ಸ್ ಹಾಗೂ ಕಮೆಂಟ್ ಪಡೆದುಕೊಳ್ಳಲು ಯತ್ನಿಸಿದ್ದಳು. ಇದನ್ನು ಮೊದಲು ನಿಲ್ಲಿಸು ಎಂದು ನೆಟ್ಟಿಗರು ಹೇಳಿದ್ದಾರೆ.

https://twitter.com/Nishantjournali/status/1819680299782975506?ref_src=twsrc%5Etfw%7Ctwcamp%5Etweetembed%7Ctwterm%5E1819680299782975506%7Ctwgr%5Eb722e2151a40ed155e419808e19fe8ba8397fb57%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fenglish%2Fthefreepressjournal-epaper-dhecf5ddffe11b4f36b496f4bee6e60122%2Fstrangergropedrippedmyshortsyounginfluencersharesvideoallegessexualharassmentinnoidaparkduringrainclaimspoliceinaction-newsid-n625027547

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read