ಬೀದಿ ನಾಯಿಗಳ ಕಡಿತಕ್ಕೆ ಮತ್ತೊಬ್ಬ ಬಾಲಕ ಬಲಿ; ಉತ್ತರ ಪ್ರದೇಶದಲ್ಲೊಂದು ದಾರುಣ ಘಟನೆ

ಇತ್ತೀಚಿನ ದಿನಗಳಲ್ಲಿ ಬೀದಿ ನಾಯಿಗಳ ಕಡಿತಕ್ಕೊಳಗಾಗಿ ಚಿಕ್ಕ ಬಾಲಕರು ಸಾವನ್ನಪ್ಪಿರುವ ಅನೇಕ ಪ್ರಕರಣಗಳು ನಡೆದಿದ್ದವು. ಇದೀಗ ಅಂತಹುದೇ ಒಂದು ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ಬೀದಿ ನಾಯಿಗಳ ದಾಳಿಗೆ ಏಳು ವರ್ಷದ ಬಾಲಕ ಬಲಿಯಾಗಿದ್ದಾನೆ.

ಸಹರಾನ್ಪುರ್ ಜಿಲ್ಲೆ ಗನ್ಗೋ ಪೊಲೀಸ್ ಠಾಣೆ ವ್ಯಾಪ್ತಿಯ ಬಿಲಾಸಪುರ ಗ್ರಾಮದಲ್ಲಿ ಶನಿವಾರ ಸಂಜೆ ಈ ಘಟನೆ ನಡೆದಿದ್ದು, ವಿಕಾಸ್ ಎಂಬುವರ ಏಳು ವರ್ಷದ ಪುತ್ರ ತನ್ನ ಮನೆಯ ಬಳಿ ಆಟವಾಡುತ್ತಿದ್ದಾಗ, ಏಕಾಏಕಿ ಬೀದಿ ನಾಯಿಗಳು ದಾಳಿ ನಡೆಸಿವೆ.

ಇದರಿಂದಾಗಿ ಬಾಲಕ ಕಿರುಚಿಕೊಂಡರೂ ನಾಯಿಗಳ ದಾಳಿ ನಿಂತಿಲ್ಲ. ಕೂಡಲೇ ಸಹಾಯಕ್ಕೆ ಧಾವಿಸಿ ಬಂದ ಗ್ರಾಮಸ್ಥರು ನಾಯಿಗಳನ್ನು ಓಡಿಸಿ ಬಾಲಕನನ್ನು ರಕ್ಷಿಸಲು ಮುಂದಾದರೂ ಸಹ ಅಷ್ಟರಲ್ಲಾಗಲೇ ತೀವ್ರ ಕಡಿತಕ್ಕೆ ಒಳಗಾಗಿದ್ದ ಬಾಲಕ ಸಾವನ್ನಪ್ಪಿದ್ದ ಎಂದು ತಿಳಿದುಬಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read