HomeKarnatakaಶಾಲೆಗೆ ಹೋಗುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ; ಬೆದರಿಸಿ ಓಡಿಸಿದ ಬಾಲಕ; ಕೂದಲೆಳೆ ಅಂತರದಲ್ಲಿ...

ಶಾಲೆಗೆ ಹೋಗುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ; ಬೆದರಿಸಿ ಓಡಿಸಿದ ಬಾಲಕ; ಕೂದಲೆಳೆ ಅಂತರದಲ್ಲಿ ಬಚಾವ್

ಬೆಂಗಳೂರು: ಎಂದಿನಂತೆ ಬೆಳಿಗ್ಗೆ ಶಾಲೆಗೆ ಹೋಗುತ್ತಿದ್ದ ಬಾಲಕನ ಮೇಲೆ ಏಕಾಏಕಿ ಬೀದಿನಾಯಿಗಳು ದಾಳಿ ನಡೆಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ನಗರದಲ್ಲಿ ನಡೆದಿದೆ.

ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಬಾಲಕನ ಮೇಲೆ ಎರಡು ಬೀದಿನಾಯಿಗಳು ದಾಳಿ ನಡೆಸಿವೆ. ಬಾಲಕ ಕಂಗಾಲಾದರೂ ದೃತಿಗೆಡದೇ ನಾಯಿಗಳನ್ನು ಬೆದರಿಸಿ ಓಡಿಸಿದ್ದಾನೆ. ಇದೇ ವೇಳೆ ರಸ್ತೆ ಬಳಿ ಇದ್ದ ಮನೆಯವರು ಹೊರ ಬರುತ್ತಿದ್ದಂತೆ ಬೀದಿನಾಯಿಗಳು ಸ್ಥಳದಿಂದ ಓಡಿಹೋಗಿವೆ.

ನಾಳಿಯಗಳ ದಾಳಿಯಿಂದ ಬಾಲಕ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾನೆ. ಈ ಭಯಾನಕ ದೃಶ್ಯ್ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೀದಿನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಮಕ್ಕಳು, ಹಿರಿಯರು, ಮಹಿಳೆಯರ ಮೇಲೆ ದಾಳಿ ನಡೆಸುತ್ತಿದ್ದರೂ ಸಂಬಂಧ ಪಟ್ಟ ಅಧಿಕಾರಿಗಳು ಬೀದಿನಾಯಿಗಳ ದಾಳಿಗೆ ಕಡಿವಾಣಹಾಕಲು ಮುಂದಾಗದಿರುವುದು ದುರಂತವೇ ಸರಿ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular