ಬೀದಿನಾಯಿಗಳ ದಾಳಿಯಿಂದ ತಪ್ಪಿಸಿಕೊಳ್ಳಲು ಹೋಗಿ ಕೋಮಾ ಸ್ಥಿತಿಗೆ ತಲುಪಿದ್ದ ಯುವತಿ ಸಾವು

ರಾಯಚೂರು: ಬೀದಿನಾಯಿಗಳ ದಾಳಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿ ತಲೆಗೆ ಗಂಭೀರವಾಗಿ ಪೆಟ್ಟುಬಿದ್ದು ಕೋಮಾ ಸ್ಥಿತಿಗೆ ತಲುಪಿದ್ದ ಯುವತಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.

20 ವರ್ಷದ ಯುವತಿ ಮಹಾದೇವಿ ಮೃತರು. ಯುವತಿ ಮಹಾದೇವಿ ಬೆಳಿಗ್ಗೆ ದೇವಸ್ಥಾನಕ್ಕೆಂದು ಹೊರಟಿದ್ದ ವೇಳೆ ಬೀದಿನಾಯಿಗಳು ದಾಳಿ ನಡೆಸಿವೆ. ನಾಯಿಗಳಿಂದ ತಪ್ಪಿಸಿಕೊಳ್ಳಲು ಹೋಗಿ ಕೆಳಗೆಬಿದ್ದ ಯುವತಿಯ ತಲೆಗೆ ಗಂಭೀರವಾದ ಪೆಟ್ಟಾಗಿದೆ. ಇಷ್ಟಾದರೂ ನಾಯಿಗಳು ಯುವತಿಯನ್ನು ಎಳೆದಾಡಿವೆ. ಇದನ್ನು ಕಂಡು ಸ್ಥಳೀಯರು ಯುವತಿಯನ್ನು ರಕ್ಷಿಸಿ ರಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಯುವತಿಯ ತಲೆಗೆ ಬಲವಾಗಿ ಪೆಟ್ಟು ಬಿದ್ದಿರುವುದರಿಂದ ರಕ್ತ ಹೆಪ್ಪುಗಟ್ಟಿದ್ದು, ಪ್ರಜ್ಞೆ ಕಳೆದುಕೊಂಡಿರುವ ಯುವತಿ ಕೋಮಾ ಸ್ಥಿತಿ ತಲುಪಿದ್ದರು. ರಿಮ್ಸ್ ಆಸ್ಪತ್ರೆಯಲ್ಲಿ ಯುವತಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಗದೇ ಯುವತಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read