HomeLatest NewsBREAKING: ಹೂವು ತರಲು ಹೋಗಿದ್ದ ಮಹಿಳೆ ಮೇಲೆ ಬೀದಿನಾಯಿ ದಾಳಿ: ಮಹಿಳೆ ಸಾವು

BREAKING: ಹೂವು ತರಲು ಹೋಗಿದ್ದ ಮಹಿಳೆ ಮೇಲೆ ಬೀದಿನಾಯಿ ದಾಳಿ: ಮಹಿಳೆ ಸಾವು

ಗದಗ: ಬೀದೀನಾಯಿಗಳ ದಾಳಿಗೆ ಸಾರ್ವಜನಿಕರು ಬಲಿಯಾಗುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಬೀದಿನಾಯಿ ಹಾವಳಿಗೆ ಕಡಿವಾಣ ಹಾಕಿಲ್ಲ. ಗದಗ ಜಿಲ್ಲೆಯಲ್ಲಿ ಮಹಿಳೆಯೊಬ್ಬರು ಬೀದಿನಾಯಿ ದಾಳಿಗೆ ಬಲಿಯಾಗಿರುವ ಘಟನೆ ನಡೆದಿದೆ.

ಹೂವು ತರಲೆಂದು ಹೋಗುತ್ತಿದ್ದ ಮಹಿಳೆ ಮೇಲೆ ಬೀದಿ ನಾಯಿ ದಾಳಿ ನಡೆಸಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಸಾವನ್ನಪ್ಪಿದ್ದಾರೆ. ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಪ್ರೇಮವ್ವ ಚೋಳಿನ (52) ಮ್ರ‍ಿತ ಮಹಿಳೆ.

ಘಟನೆಯಿಂದಾಗಿ ಸ್ಥಳೀಯರು ಪುರಸಭೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗಜೇಂದ್ರಗಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular