HomeLive Newsಬೆಂಗಳೂರಿನಲ್ಲಿ ವಿದ್ಯಾರ್ಥಿನಿ ಮೇಲೆ 15 ಬೀದಿನಾಯಿಗಳು ದಾಳಿ

ಬೆಂಗಳೂರಿನಲ್ಲಿ ವಿದ್ಯಾರ್ಥಿನಿ ಮೇಲೆ 15 ಬೀದಿನಾಯಿಗಳು ದಾಳಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೀದಿನಾಯಿಗಳ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇಷ್ಟಾದರೂ ಬೀದಿ ನಾಯಿಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮಗಳನ್ನು ಕಾರ್ಯರೂಪಕ್ಕೆ ತಂದಿಲ್ಲ. ವಿದ್ಯಾರ್ಥಿನಿಯೊಬ್ಬಳಿಗೆ ಬರೋಬ್ಬರಿ 15 ಬೀದಿನಾಯಿಗಳು ಏಕಕಾಲಕ್ಕೆ ದಾಳಿ ನಡೆಸಿರುವ ಘಟನೆ ಬೆಂಗಳೂರಿನ ಹೊಯ್ಸಳ ನಗರದಲ್ಲಿ ನಡೆದಿದೆ.

ಮೇಘನಾ ಎಂಬ ವಿದ್ಯಾರ್ಥಿನಿ ಬೀದಿನಾಯಿಗಳ ದಾಳಿಗೆ ಗಂಭೀರವಾಗಿ ಗಾಯಗೊಂಡಿದ್ದಾಳೆ. ಟ್ಯೂಷನ್ ಕ್ಲಾಸ್ ಮುಗೊಸಿಕೊಂಡು ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿನಿ ಮೇಲೆ ಬೀದಿನಾಯಿಗಳ ಗುಂಪು ದಾಳಿ ನಡೆಸಿದೆ. ವಿದ್ಯಾರ್ಥಿನಿ ಕುರುಚಾಡಿದರೂ ಬಿಟ್ಟಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗಂಭೀರವಾಗಿ ಗಾಯಗೊಂಡಿರುವ ವಿದ್ಯಾರ್ಥಿನಿಯನ್ನು ಕೆ.ಆರ್.ಪುರಂ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೀದಿನಾಯಿಗಳಿಗೆ ಕಡಿವಾಣ ಹಾಕುವಂತೆ ಸುಪ್ರೀಂ ಕೋರ್ಟ್ ಸೂಚಿಸಿದ್ದರೂ ಕೂಡ ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ ವಹಿಸಿರುವುದು ನಿಜಕ್ಕೂ ದುರಂತವೇ ಸರಿ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular