HomeKarnatakaಬೀದಿನಾಯಿಗಳ ಹಾವಳಿಗೆ ಬೇಸತ್ತು ಕಾಲಭೈರವೇಶ್ವರ, ದತ್ತಾತ್ರೇಯ ಸ್ವಾಮಿ ಮೊರೆ ಹೋದ ಅಪಾರ್ಟ್ ಮೆಂಟ್ ನಿವಾಸಿಗಳು

ಬೀದಿನಾಯಿಗಳ ಹಾವಳಿಗೆ ಬೇಸತ್ತು ಕಾಲಭೈರವೇಶ್ವರ, ದತ್ತಾತ್ರೇಯ ಸ್ವಾಮಿ ಮೊರೆ ಹೋದ ಅಪಾರ್ಟ್ ಮೆಂಟ್ ನಿವಾಸಿಗಳು

ಬೆಂಗಳೂರು: ರಾಜ್ಯ ರಾಜಧಾಅನಿ ಬೆಂಗಳೂರಿನಲ್ಲಿ ಬೀದಿನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಬೀದಿನಾಯಿಗಳ ಉಪಟಳಕ್ಕೆ ಕಡಿವಾಣಹಾಕಬೇಕಾದ ಅಧಿಕಾರಿಗಳು ಕೈಕಟ್ಟಿ ಕುಳಿತಿದ್ದಾರೆ. ಇದರಿಂದ ಬೇಸತ್ತ ಅಪಾರ್ಟ್ ಮೆಂಟ್ ವೊಂದರ ನಿವಾಸಿಗಳು ದೇವರ ಮೊರೆ ಹೋಗಿರುವ ಘಟನೆ ನಡೆದಿದೆ.

ಬೆಂಗಳೂರಿನ ಜೆಪಿ ನಗರದ ಎಲಿಟಾ ಪ್ರೊಮೆನೇಡ್ ಅಪಾರ್ಟ್‌ಮೆಂಟ್ ನಿವಾಸಿಗಳು ಬೀದಿನಾಯಿಗಳ ಹಾವಳಿಯಿಂದ ಪರಿಹಾರ ಕಂಡುಕೊಳ್ಳಲು ವಿಶಿಷ್ಟ ಪೂಜೆ ಮಾಡಿದ್ದಾರೆ. ಸಹಬಾಳ್ವೆ ಹಾಗೂ ಶಾಂತಿಗಾಗಿ ಕಾಲಭೈರವ ಮತ್ತು ದತ್ತಾತ್ರೇಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೀದಿ ನಾಯಿಗಳ ಹಾವಳಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜನರಲ್ಲಿ ಆತಂಕ ಹೆಚ್ಚುತ್ತಿದೆ. ಇದರಿಂದಾಗಿ ರಸ್ತೆಯಲ್ಲಿ ಓಡಾಡುವುದೂ ಕಷ್ಟವಾಗಿದೆ. ಪುಟ್ಟ ಮಕ್ಕಳು, ವೃದ್ಧರು ಮಾತ್ರವಲ್ಲ ಯಾರ ಮೇಲೇ ಆದರೂ ದಾಳಿ ನಡೆಸುವ ಸಾಧ್ಯತೆ ಇದೆ. ಭಯದಲ್ಲೇ ಕಾಲ ಕಳೆಯಬೇಕಾದ ಸ್ಥಿತಿ ಇದೆ. ಇದರಿಂದ ಇಲ್ಲಿನ ಅಪಾರ್ಟ್ಮೆಂಟ್​ವೊಂದರ ನಿವಾಸಿಗಳು ದೇವರ ಮೊರೆ ಹೋಗಿದ್ದು, ಬೀದಿ ನಾಯಿ ಸಮಸ್ಯೆಗೆ ಶಾಂತಿಯುತ ಪರಿಹಾರ ಕಂಡುಹಿಡಿಯುವ ನಿಟ್ಟಿನಲ್ಲಿ ನಿವಾಸಿಗಳು ಕಾಲಭೈರವ ಮತ್ತು ದತ್ತಾತ್ರೇಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಬೀದಿ ನಾಯಿಗಳು ಹಾಗೂ ಸಾಕು ನಾಯಿಗಳಿಗೆ ಶಾಂತಿ ದೊರಕಲಿ, ಮಾನವರೊಂದಿಗೆ ಸ್ನೇಹಭಾವ ಬೆಳೆಸಲಿ ಎಂದು ನಿವಾಸಿಗಳು ಈ ಮೂಲಕ ಪ್ರಾರ್ಥಿಸಿದ್ದಾರೆ. ಅಪಾರ್ಟ್ಮೆಂಟ್ ಕ್ಲಬ್ ಹೌಸ್‌ನಲ್ಲಿ ನಡೆದ ಈ ಪೂಜೆಯಲ್ಲಿ ನಿವಾಸಿಗಳು, ಮಕ್ಕಳು ಹಾಗೂ ಸಾಕು ನಾಯಿಗಳು ಭಾಗವಹಿಸಿದ್ದರು. ಪೂಜೆ ನಂತರ ವಿಶೇಷ ಪ್ರಸಾದ ಹಾಗೂ ಆಹಾರ ವ್ಯವಸ್ಥೆ ಮಾಡಲಾಗಿತ್ತು. ಕಾರ್ಯಕ್ರಮದ ವೇಳೆ ಕೆಲ ನಿವಾಸಿಗಳು ಮಾತನಾಡಿ, ಇತ್ತೀಚೆಗೆ ಬೀದಿ ನಾಯಿಗಳಿಂದ ಎದುರಾಗುತ್ತಿರುವ ತೊಂದರೆಗಳ ಬಗ್ಗೆ ತಮ್ಮ ಅನುಭವ ಹಂಚಿಕೊಂಡರು.

ನಗರದಲ್ಲಿ ಬೀದಿ ನಾಯಿಗಳ ಸಮಸ್ಯೆ ಹೆಚ್ಚುತ್ತಿದ್ದು, ಕೆಲವೆಡೆ ಮಕ್ಕಳಿಗೆ ಹಾಗೂ ನಿವಾಸಿಗಳಿಗೆ ಕಚ್ಚಿದ ಘಟನೆಗಳೂ ವರದಿಯಾಗಿವೆ. ಇಂತಹ ಸಂದರ್ಭದಲ್ಲಿ ಪೂಜೆ ಮತ್ತು ಪ್ರಾರ್ಥನೆಯ ಮೂಲಕ ಮಾನವ-ನಾಯಿ ನಡುವಿನ ಸ್ನೇಹವನ್ನು ಹೆಚ್ಚಿಸಲು ನಿವಾಸಿಗಳು ಮುಂದಾಗಿರುವುದು ವಿಶೇಷವಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular