BIG NEWS : ‘ಬಾಲ ಕಾರ್ಮಿಕ’ರನ್ನು ನೇಮಿಸಿಕೊಳ್ಳುವ ಉದ್ಯಮಿಗಳ ವಿರುದ್ಧ ಕಠಿಣ ಕ್ರಮ : ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಬೆಂಗಳೂರು : ಬಾಲ ಕಾರ್ಮಿಕರನ್ನು ನೇಮಿಸಿಕೊಳ್ಳುವ ಉದ್ಯಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು  ಸಿಎಂ ಸಿದ್ದರಾಮಯ್ಯ ( CM Siddaramaiah) ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನ ಎಂಜಿ ರಸ್ತೆಯಲ್ಲಿರುವ ಗಾಂಧಿ ಪ್ರತಿಮ ಬಳಿ ಬಾಲಕಾರ್ಮಿಕ ವಿರೋಧಿ ದಿನ ಜಾಥಾಗೆ ಚಾಲನೆ ನೀಡಿದ ಸಿದ್ದರಾಮಯ ನಂತರ ಮಾತನಾಡಿದರು.

ಮಕ್ಕಳಿಗೆ ಶಿಕ್ಷಣ ಕೊಡಿಸುವುದು ನಮ್ಮ ಜವಾಬ್ದಾರಿ, ಯಾವ ಮಕ್ಕಳು ಕೂಡ ಶಿಕ್ಷಣದಿಂದ ಹೊರಗುಳಿಯಬಾರದು, ಗುಲಾಮಗಿರಿ ಮನಸ್ಥಿತಿಯಿಂದ ಹೊರ ಬರಬೇಕು ಎಂದು ಹೇಳಿದ್ದಾರೆ.ಬಾಲ ಕಾರ್ಮಿಕರಾಗಿ ದುಡಿಯುತ್ತಿರುವ ಮಕ್ಕಳು ಈ ಕೆಟ್ಟ ವ್ಯವಸ್ಥೆಯಿಂದ ಹೊರರಬಂದು ತಮ್ಮ ಹಕ್ಕುಗಳ ಕುರಿತು ಜಾಗೃತಿ ಹೊಂದಿ ದೇಶದ ಉತ್ತಮ ಪ್ರಜೆಯಾಗಿ ಬೆಳೆಯಬೇಕು ಎಂದರು. ಬಾಲ ಕಾರ್ಮಿಕರನ್ನು ನೇಮಿಸಿಕೊಳ್ಳುವ ಉದ್ಯಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಹೋಟೆಲ್, ಶಾಪ್ಗಳು ಹಾಗೂ ಇತರ ಉದ್ಯಮಗಳಲ್ಲಿ ಮಕ್ಕಳನ್ನು ದುಡಿಮೆಗೆ ಹಚ್ಚುವುದನ್ನು ಕಂಡರೆ ಸಂಬಂಧಪಟ್ಟವರಿಗೆ ಮಾಹಿತಿ ನೀಡಿ ಮಾಲೀಕರಿಗೆ ತಿಳುವಳಿಕೆ ನೀಡಬೇಕು ಎಂದು ಕರೆ ನೀಡಿದರು

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read