BIG NEWS : ನಕಲಿ ಬೀಜ, ರಸಗೊಬ್ಬರ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ : ಎಚ್ಚರಿಕೆ ನೀಡಿದ ಕೃಷಿ ಸಚಿವರು

ಬೆಂಗಳೂರು : ನಕಲಿ ಬೀಜ, ರಸಗೊಬ್ಬರ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಕೃಷಿ ಸಚಿವ ಚಲುವರಾಯಸ್ವಾಮಿ ರಾಜ್ಯಾದ್ಯಂತ ಮುಂಗಾರು ಆರಂಭವಾಗಿರುವ ಹಿನ್ನೆಲೆಯಲ್ಲಿ ಕಳಪೆ ಬಿತ್ತನೆಬೀಜ, ರಸಗೊಬ್ಬರ, ನಕಲಿ ಔಷಧಿಗಳನ್ನು ಮಾರಾಟ ಮಾಡುವವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುತ್ತದೆ. ಯಾರೇ ತಪ್ಪಿತಸ್ಥರಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

ರಾಜ್ಯಾದ್ಯಂತ ಕಳಪೆ ಬೀಜ, ನಕಲಿ ಔಷಧಿ, ರಸಗೊಬ್ಬರ ಪೂರೈಕೆ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಅಂತಹವರ ಮೇಲೆ ನಿಗಾ ಇಡಲಾಗಿದೆ.. ಪದೇ ಪದೇ ಈ ರೀತಿಯ ಪ್ರಕರಣಗಳು ಕಂಡು ಬಂದರೆ ಲೈಸೆನ್ಸ್ ರದ್ದು ಮಾಡುವುದಾಗಿ ಎಚ್ಚರಿಕೆ ನೀಡಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read