BREAKING : ವಿದ್ಯಾರ್ಥಿಗೆ ಕಾಲಿನಿಂದ ಒದ್ದು ಕ್ರೌರ್ಯ ಮೆರೆದ ಶಿಕ್ಷಕನ ವಿರುದ್ಧ ಕಠಿಣ ಕ್ರಮ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು : ವಿದ್ಯಾರ್ಥಿಗೆ ಕಾಲಿನಿಂದ ಒದ್ದು ಕ್ರೌರ್ಯ ಮೆರೆದ ಶಿಕ್ಷಕನ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಈ ಪ್ರಕರಣದಲ್ಲಿ ಶಿಕ್ಷಕನನ್ನು ಬಿಡುವ ಪ್ರಶ್ನೆಯೇ ಇಲ್ಲ. ವರದಿ ತರಿಸಿಕೊಂಡು ಕ್ರಮ ಕೈಗೊಳ್ಳುತ್ತೇವೆ. ಶಿಕ್ಷಕನಾದವನು ಹೀಗೆ ವರ್ತಿಸಿದರೆ ಹೇಗೆ..? ಆತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಅವರು ಹೇಳಿದರು.

ಶಾಲೆಯಲ್ಲಿ 9 ವರ್ಷದ ವಿದ್ಯಾರ್ಥಿಗೆ ಒದ್ದು ಮುಖ್ಯ ಶಿಕ್ಷಕನೋರ್ವ ಕ್ರೌರ್ಯ ಮೆರೆದಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಗ್ರಾಮದಲ್ಲಿ ನಡೆದಿದೆ.ಘಟನೆಯ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಸಂಸ್ಕ್ರತ ವೇದ ಅಧ್ಯಯನ ಶಾಲಾ ಮುಖ್ಯ ಶಿಕ್ಷಕ 9 ನೇ ತರಗತಿ ಬಾಲಕನಿಗೆ ಒದ್ದು ಕ್ರೌರ್ಯ ಮೆರೆದಿದ್ದಾನೆ. ಮುಖ್ಯ ಶಿಕ್ಷಕ ವಿರೇಶ್ ಹೀರೇಮಠ್ ಎಂಬಾತ ಶಿಕ್ಷಕನ ಮೇಲೆ ಮನಸೋ ಇಚ್ಚೆ ಕಾಲಿನಿಂದ ಒದ್ದು ಹಲ್ಲೆ ನಡೆಸಿದ್ದಾನೆ. ಫುಟ್ ಬಾಲ್ ನಂತೆ ಪದೇ ಪದೇ ವಿದ್ಯಾರ್ಥಿಗೆ ಒದ್ದಿದ್ದಾನೆ. ಅಜ್ಜಿಗೆ ಫೋನ್ ಮಾಡಿದ್ದನ್ನು ಪ್ರಶ್ನಿಸಿ ಈ ಹಲ್ಲೆ ನಡೆಸಿದ್ದಾನೆ. ವಿಡಿಯೋ ಎಲ್ಲಾ ಕಡೆ ವೈರಲ್ ಆಗುತ್ತಿದ್ದಂತೆ ಶಿಕ್ಷಕ ವೀರೇಶ್ ನಾಪತ್ತೆಯಾಗಿದ್ದು, ನಾಯಕನಹಟ್ಟಿ ಪೊಲೀಸ್ ಠಾಣೆಯಲ್ಲಿ ಶಿಕ್ಷಕನ ವಿರುದ್ಧ ದೂರು ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read