BIG NEWS : ಹಿಂದೂ ಕಾರ್ಯಕರ್ತ ‘ಸುಹಾಸ್ ಶೆಟ್ಟಿ’ ಕೊಲೆ ಪ್ರಕರಣದ ಆರೋಪಿಗಳ ವಿರುದ್ಧ ಕಠಿಣ ಕ್ರಮ : CM ಸಿದ್ದರಾಮಯ್ಯ

ಬೆಂಗಳೂರು : ಹಿಂದೂ ಕಾರ್ಯಕರ್ತ ‘ಸುಹಾಸ್ ಶೆಟ್ಟಿ’ ಕೊಲೆ ಪ್ರಕರಣದ ಆರೋಪಿಗಳನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸುಹಾಸ್ ಶೆಟ್ಟಿ ಹತ್ಯೆಗೆ ಸಂಬಂಧಪಟ್ಟಂತೆ ನಿನ್ನೆಯೇ ಕಾನೂನು ಸುವ್ಯವಸ್ಥೆ ಎಡಿಜಿಪಿ ಅವರಿಗೆ ಮಂಗಳೂರಿಗೆ ಹೋಗಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ.ಕೊಲೆ ಯಾರದ್ದೇ ಆಗಿರಲಿ, ಯಾವ ಕಾರಣಕ್ಕೆ ಆಗಿರಲಿ, ನಮಗೆ ಪ್ರತಿ ಜೀವವೂ ಮುಖ್ಯ. ಈ ಹೀನ ಕೃತ್ಯ ಎಸಗಿರುವ ಅಪರಾಧಿಗಳ ಹೆಡೆಮುರಿ ಕಟ್ಟುವುದು ನಿಶ್ಚಿತ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬಿಜೆಪಿಯವರು ಸದಾಕಾಲ ಸಾವಿನಲ್ಲಿ ರಾಜಕಾರಣ ಮಾಡುತ್ತಾರೆ. ಇಂದು ಅವರು ಮಂಗಳೂರಿಗೆ ಹೊರಟಿದ್ದಾರೆ, ಕಳೆದ ವಾರ ಪಹಲ್ಗಾಮ್ ನಲ್ಲಿ ಭಯೋತ್ಪಾದಕರ ಕೃತ್ಯಕ್ಕೆ 26 ಜನರು ಸಾವಿಗೀಡಾದರು, ಅಲ್ಲಿಗೆ ಇವರು ಹೋಗಿದ್ರಾ? ಪ್ರಧಾನಿಗಳು ಹೋದ್ರಾ? ಯಾಕೆ ಅದು ಕೂಡ ಭದ್ರತಾ ವೈಫಲ್ಯವಲ್ಲವಾ? ಎಂದು ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read