Be Alert : ‘ಆಪರೇಷನ್ ಸಿಂಧೂರ್’ ಕುರಿತು ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ : ಕಮಿಷನರ್ ಬಿ. ದಯಾನಂದ್ ಎಚ್ಚರಿಕೆ

ಆಪರೇಷನ್ ಸಿಂಧೂರ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕಮಿಷನರ್ ಬಿ ದಯಾನಂದ್ ಎಚ್ಚರಿಕೆ ನೀಡಿದ್ದಾರೆ.

ಆಪರೇಷನ್ ಸಿಂಧೂರ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು. ದಾಳಿಯ ಸಂಬಂಧ ಕೆಲವು ಕಿಡಿಗೇಡಿಗಳು ಸುಳ್ಳು ಸುದ್ದಿ ಹರಡುತ್ತಿದ್ದಾರೆ. ಅಂಥವರ ವಿರುದ್ಧ ಕ್ರಮಕ್ಕೆ ಸೂಚಿಸಲಾಗಿದೆ. ಭಾರತದ ಗಡಿ ಪ್ರದೇಶದಲ್ಲಿ ಹಲವು ಬೆಳವಣಿಗೆಗಳು ನಡೆಯುತ್ತಿವೆ. ರಕ್ಷಣಾ ಇಲಾಖೆ ಅಧಿಕಾರಿಗಳೇ ಅಧಿಕೃತವಾಗಿ ಮಾಹಿತಿ ನೀಡುತ್ತಿದ್ದಾರೆ. ಸಾರ್ವಜನಿಕರು ಸಮಾಜಕ್ಕೆ ತಪ್ಪು ಮಾಹಿತಿ ನೀಡಬಾರದು ಎಂದು ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ. ದಯಾನಂದ ಅವರು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read