HomeLatest NewsBREAKING : 'ಟಿಕೆಟ್ ಬೆಲೆ' ಏರಿಸಿದ್ರೆ ಕಠಿಣ ಕ್ರಮ : ಎಲ್ಲಾ ವಿಮಾನಯಾನ ಸಂಸ್ಥೆಗಳಿಗೆ 'ಕೇಂದ್ರ...

BREAKING : ‘ಟಿಕೆಟ್ ಬೆಲೆ’ ಏರಿಸಿದ್ರೆ ಕಠಿಣ ಕ್ರಮ : ಎಲ್ಲಾ ವಿಮಾನಯಾನ ಸಂಸ್ಥೆಗಳಿಗೆ ‘ಕೇಂದ್ರ ಸರ್ಕಾರ’ ಎಚ್ಚರಿಕೆ.!

ಬೆಂಗಳೂರು : ದೇಶಾದ್ಯಂತ ಇಂಡಿಗೋ ವಿಮಾನ ಹಾರಾಟದಲ್ಲಿ ಕಳೆದ ಐದು ದಿನಗಳಿಂದ ವ್ಯತ್ಯಯವುಂಟಾಗಿದ್ದು, ಸಾವಿರಾರು ಇಂಡಿಗೋ ವಿಮಾನಗಳ ಹಾರಾಟ ರದ್ದಾಗಿವೆ. ಬೆಂಗಳೂರು, ಚೆನ್ನೈ, ದೆಹಲಿ, ಮುಂಬೈ, ಕೊಚ್ಚಿ ಸೇರಿದಂತೆ ಹಲವು ಏರ್ ಪೋರ್ಟ್ ಗಳಲ್ಲಿ ಪ್ರಯಾಣಿಕರು ಪರದಾಡುತ್ತಿದ್ದಾರೆ. ಈ ನಡುವೆ ಇತರೆ ಫ್ಲೈಟ್ ಟಿಕೆಟ್ ಗಳ ದರ ಗಗನಕ್ಕೇರಿವೆ.

ಕೇಂದ್ರವು ಎಲ್ಲಾ ವಿಮಾನಯಾನ ಸಂಸ್ಥೆಗಳು ಹೊಸದಾಗಿ ನಿಗದಿಪಡಿಸಿದ ದರ ಮಿತಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ನಿರ್ದೇಶಿಸಿದೆ. ಅವಕಾಶವಾದಿ ಬೆಲೆ ನಿಗದಿ” ಯಿಂದ ಪ್ರಯಾಣಿಕರನ್ನು ರಕ್ಷಿಸುವ ಗುರಿಯನ್ನು ಹೊಂದಿರುವ ತನ್ನ ಆದೇಶದಲ್ಲಿ, ನಾಗರಿಕ ವಿಮಾನಯಾನ ಸಚಿವಾಲಯವು ನಿಗದಿತ ಮಾನದಂಡಗಳಿಂದ ದರ ಮಟ್ಟದಲ್ಲಿ ಯಾವುದೇ ಏರಿಕೆ ಕಂಡುಬಂದರೆ ತಕ್ಷಣದ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದೆ.

ಇಂಡಿಗೋ ವಿಮಾನ ಹಾರಾಟದಲ್ಲಿ ಭಾರಿ ವ್ಯತ್ಯಯವಾಗಿರುವ ಪರಿಸ್ಥಿತಿ ಲಾಭ ಪಡೆದುಕೊಳ್ಳುತ್ತಿರುವ ಇತರೆ ಏರ್ ಲೈನ್ಸ್ ಗಳು ಭಾರಿ ಪ್ರಮಾಣದಲ್ಲಿ ಟಿಕೆಟ್ ದರ ಹೆಚ್ಚಳ ಮಾಡಿವೆ. ಏರ್ ಫೇರ್ ನಿಯಮಗಳನ್ನು ಉಲ್ಲಂಘಿಸಿ ಟಿಕೆಟ್ ಮೇಲೆ ಹತ್ತಕ್ಕಿಂತ ಹೆಚ್ಚುಪಟ್ಟು ಬೆಲೆ ಏರಿಕೆ ಮಾಡಿದ್ದು, ಪ್ರಯಾಣಿಕರು ಹೈರಾಣಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಹಾನಗರಿಗಳಿಗೆ ವಿಮಾನ ಟಿಕೆಟ್ ದರದಲ್ಲಿ 5-8 ಸಾವಿರದವರೆಗೂ ಏರಿಕೆಯಾಗಿದೆ. ಎಕಾನಾಮಿ ಕ್ಲಾಸ್ ಟಿಕೆಟ್ ದರಗಳು 50-80 ಸಾವಿರ ರೂಪಾಯಿವರೆಗೂ ಏರಿಕೆಯಾಗಿವೆ. ಬೆಂಗಳೂರಿನಿಂದ ಮುಂಬೈಗೆ 25-75 ಸಾವಿರ ರೂಪಾಯಿ ಟಿಕೆಟ್ ದರ ಏರಿಕೆಯಾಗಿದೆ. ಬೆಂಗಳೂರಿನಿಂದ ಕೊಚ್ಚಿಗೆ 18 ಸಾವಿರ ರೂಪಾಯಿ ಟಿಕೆಟ್ ದರ ಹೆಚ್ಚಳವಾಗಿದೆ. ಇತರ ವಿಮಾನಯಾನ ಸಂಸ್ಥೆಗಳು ಪ್ರಯಾಣಿಕರಿಂದ ವಸೂಲಿಗಿಳಿದಿದ್ದು, ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಇಂಡಿಗೋ ಹಾರಾಟದಲ್ಲಿ ವ್ಯತ್ಯಯ, ಇತರ ವಿಮಾನಗಳ ಟಿಕೆಟ್ ದರ ಭಾರಿ ಏರಿಕೆ ಬಗ್ಗೆ ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡುವಂತೆ ವಿಪಕ್ಷಗಳು ಸಂಸತ್ ಅಧಿವೇಶನದಲ್ಲಿ ಧ್ವನಿ ಎತ್ತಿದವು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular