HomeKarnatakaನಿಗದಿಗಿಂತ ಹೆಚ್ಚಿನ ದರಕ್ಕೆ ಆಟೋ LPG/CNG ಮಾರಾಟ ಮಾಡಿದರೆ ಕಠಿಣ ಕ್ರಮ

ನಿಗದಿಗಿಂತ ಹೆಚ್ಚಿನ ದರಕ್ಕೆ ಆಟೋ LPG/CNG ಮಾರಾಟ ಮಾಡಿದರೆ ಕಠಿಣ ಕ್ರಮ

ಜಿಲ್ಲೆಯಾದ್ಯಂತ ಇರುವ ಆಟೋ LPG ಮತ್ತು CNG ಬಂಕ್‌ ಗಳಲ್ಲಿ ಇಂಧನವನ್ನು ಸರ್ಕಾರ ಹಾಗೂ ತೈಲ ಕಂಪನಿಗಳು ನಿಗದಿಪಡಿಸಿದ ದರದಲ್ಲೇ ಮಾರಾಟ ಮಾಡುವುದು ಕಡ್ಡಾಯ ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಕಟ್ಟುನಿಟ್ಟಾಗಿ ತಿಳಿಸಿದ್ದಾರೆ.

ದರ ಪ್ರದರ್ಶನ ಕಡ್ಡಾಯ: ತೈಲ ಕಂಪನಿಗಳು ಅಥವಾ ಖಾಸಗಿ ಸಂಸ್ಥೆಗಳು ನಿಗದಿಪಡಿಸಿದ ದರದ ವಿವರವನ್ನು ಗ್ರಾಹಕರಿಗೆ ಹಾಗೂ ಸಾರ್ವಜನಿಕರಿಗೆ ಕಾಣುವಂತೆ ಬಂಕ್‌ ಗಳಲ್ಲಿ ಕಡ್ಡಾಯವಾಗಿ ಪ್ರದರ್ಶಿಸಬೇಕು.

ಹೆಚ್ಚುವರಿ ಹಣ ವಸೂಲಿ ಮಾಡುವಂತಿಲ್ಲ: ಯಾವುದೇ ಕಾರಣಕ್ಕೂ ನಿಗದಿತ ದರಕ್ಕಿಂತ ಹೆಚ್ಚಿನ ಹಣವನ್ನು ಗ್ರಾಹಕರಿಂದ ಪಡೆಯಬಾರದು ಎಂದು ಎಚ್ಚರಿಕೆ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾನೂನು ಕ್ರಮದ ಎಚ್ಚರಿಕೆ: ಒಂದು ವೇಳೆ ನಿಗದಿತ ದರಕ್ಕಿಂತ ಹೆಚ್ಚಿನ ಹಣ ವಸೂಲಿ ಮಾಡುತ್ತಿರುವುದು ಕಂಡುಬಂದಲ್ಲಿ, ಅಂತಹ ಬಂಕ್ ಮಾಲೀಕರ ವಿರುದ್ಧ ‘ಅಗತ್ಯ ವಸ್ತುಗಳ ಕಾಯ್ದೆ-1955’ ಮತ್ತು ‘ಲಿಕ್ವಿಫೈಡ್ ಪೆಟ್ರೋಲಿಯಂ ಗ್ಯಾಸ್ (ರೆಗ್ಯುಲೇಷನ್ ಆಫ್ ಯೂಸ್ ಇನ್ ಮೋಟರ್ ವೆಹಿಕಲ್ಸ್) ಆರ್ಡರ್-2001’ ರ ಅಡಿಯಲ್ಲಿ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular