ಬೆಂಗಳೂರು: ಸರ್ಕಾರಿ ವೈದ್ಯರು ಮತ್ತು ಖಾಸಗಿ ವೈದ್ಯಕೀಯ ಸಂಸ್ಥೆಗಳು ತಮ್ಮಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಾರಿ ವೈದ್ಯರು ಮತ್ತು ಸರ್ಕಾರಿ ಅರೆ ವೈದ್ಯಕೀಯ ಸಿಬ್ಬಂದಿಯವರ ಮಾಹಿತಿಯನ್ನು ಆಯಾ ಜಿಲ್ಲಾ ಕೆಪಿಎಂಇ ನೋಂದಣಿ ಮತ್ತು ಕುಂದು ಕೊರತೆ ನಿವಾರಣಾ ಪ್ರಾಧಿಕಾರಕ್ಕೆ ಮತ್ತು ರಾಜ್ಯ ಸರ್ಕಾರಕ್ಕೆ ಒದಗಿಸುವ ಬಗ್ಗೆ ಸರ್ಕಾರದ ಆದೇಶಿಸಿದೆ.
ರಾಜ್ಯದ ಎಲ್ಲಾ ಖಾಸಗಿ ವೈದ್ಯಕೀಯ ಸಂಸ್ಥೆಗಳು ತಮ್ಮಲ್ಲಿ ಕಾರ್ಯ ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಾರಿ ವೈದ್ಯರ ಮತ್ತು ಅರೆ ಸರ್ಕಾರಿ ವೈದ್ಯರ ಸರ್ಕಾರಿ ಅರೆ ವೈದ್ಯಕೀಯ ಸಿಬ್ಬಂದಿ ಮಾಹಿತಿಯನ್ನು ಆಯಾ ಜಿಲ್ಲಾ ಕೆಪಿಎಂಇ ನೋಂದಣಿ ಕುಂದು ಕೊರತೆ ನಿವಾರಣಾ ಪ್ರಾಧಿಕಾರ ಮತ್ತು ಆರೋಗ್ಯ ಇಲಾಖೆ ಆಯುಕ್ತರಿಗೆ ನೀಡುವಂತೆ ಸರ್ಕಾರ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಆರೋಗ್ಯ ಇಲಾಖೆ ಜಾಲತಾಣದಲ್ಲಿ ಪ್ರಕಟಿಸಿದ ವೈದ್ಯರ ಸೇವೆಯ ಮಾಹಿತಿಯನ್ನು ಖಾತ್ರಿಪಡಿಸಬೇಕು. ಅಲ್ಲದೇ ಯಾವುದೇ ಸರ್ಕಾರಿ ವೈದ್ಯರು ಅವರ ಸಂಸ್ಥೆಗಳಲ್ಲಿ ಒಳ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿಲ್ಲ ಎಂಬುದನ್ನು ದೃಢೀಕರಿಸಬೇಕು ಎಂದು ನಿರ್ದೇಶಿಸಿದೆ.
ಸರ್ಕಾರಿ ವೈದ್ಯರು ಮತ್ತು ಅರೆ ವೈದ್ಯಕೀಯ ಸಿಬ್ಬಂದಿ ತಾವು ಖಾಸಗಿ ವೈದ್ಯಕೀಯ ವೃತ್ತಿ ಮಾಡುತ್ತಿರುವ ಬಗ್ಗೆ ಜಿಲ್ಲಾ ಆರೋಗ್ಯ ಅಧಿಕಾರಿ ಹಾಗೂ ಆರೋಗ್ಯ ಇಲಾಖೆ ಆಯುಕ್ತರಿಗೆ ಮಾಹಿತಿ ಸಲ್ಲಿಸಬೇಕು. ಅಲ್ಲದೇ ಖಾಸಗಿ ವೈದ್ಯಕೀಯ ಸಂಸ್ಥೆಗಳಲ್ಲಿ ಕೇವಲ ಹೊರರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ಕುರಿತು ದೃಢೀಕರಿಸಲು ತಿಳಿಸಲಾಗಿದೆ.


