ಭ್ರೂಣ ಲಿಂಗ ಪತ್ತೆ, ಗರ್ಭಪಾತ ನಡೆಸುವವರ ವಿರುದ್ಧ ಕಠಿಣ ಕ್ರಮ-ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ರಾಜ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸ್ಕ್ಯಾನಿಂಗ್ ಸೆಂಟರ್ಗಳ ಮೇಲೆ ಕಟ್ಟೆಚ್ಚರ ವಹಿಸಲಾಗಿದೆ ಎಂದು  ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಸಾಮಾಜಿಕ ಪಿಡುಗಾಗಿರುವ ಹೆಣ್ಣು ಭ್ರೂಣ ಹತ್ಯೆ, ಭ್ರೂಣ ಲಿಂಗ ಪತ್ತೆಯನ್ನು ರಾಜ್ಯದಲ್ಲಿ ಸಂಪೂರ್ಣವಾಗಿ ಕೊನೆಗಾಣಿಸಲು ನಮ್ಮ ಆರೋಗ್ಯ ಇಲಾಖೆ ಕಾರ್ಯಪ್ರವೃತ್ತವಾಗಿದೆ.

ರಾಜ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆಗೆ ಕಡಿವಾಣ ಹಾಕಲು ಆರೋಗ್ಯ ಇಲಾಖೆಯು ಪೊಲೀಸ್ ಇಲಾಖೆ ಸಹಯೋಗದೊಂದಿಗೆ ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ಟಾಸ್ಕ್ ಫೋರ್ಸ್ಗಳನ್ನು ರಚಿಸಿ ಎಲ್ಲಾ ಹೆರಿಗೆ ಆಸ್ಪತ್ರೆ, ಸ್ಕ್ಯಾನಿಂಗ್ ಸೆಂಟರ್ಗಳ ಮೇಲೆ ಕಟ್ಟೆಚ್ಚರ ವಹಿಸುತ್ತಿದೆ.

ಹೆಣ್ಣು ಭ್ರೂಣ ಹತ್ಯೆ ತಡೆಗೆ ಈಗಾಗಲೇ ಜಾರಿಯಲ್ಲಿರುವ ಕಾನೂನನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲಾಗಿದ್ದು ಭ್ರೂಣ ಲಿಂಗ ಪತ್ತೆ ಮತ್ತು ಗರ್ಭಪಾತ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಂಡು ದಂಡದ ಪ್ರಮಾಣ ಹೆಚ್ಚಳ ಮಾಡಲಾಗಿದೆ. ಅಮಾನವೀಯವಾದ ಹೆಣ್ಣು ಭ್ರೂಣ ಹತ್ಯೆಯನ್ನು ಕೊನೆಗಾಣಿಸಿ ರಾಜ್ಯದಲ್ಲಿ ಲಿಂಗ ಸಮಾನತೆಯನ್ನು ಸಾಧಿಸುವತ್ತ ಆರೋಗ್ಯ ಇಲಾಖೆ ಮುಂದಡಿ ಇಟ್ಟಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read