HomeKarnatakaಮಾ.1 ರಿಂದ ಕರ್ತವ್ಯಕ್ಕೆ ಗೈರಾಗಿ ಮುಷ್ಕರದಲ್ಲಿ ಭಾಗವಹಿಸಲು ಸರ್ಕಾರಿ ನೌಕರರಿಗೆ ಷಡಾಕ್ಷರಿ ಕರೆ

ಮಾ.1 ರಿಂದ ಕರ್ತವ್ಯಕ್ಕೆ ಗೈರಾಗಿ ಮುಷ್ಕರದಲ್ಲಿ ಭಾಗವಹಿಸಲು ಸರ್ಕಾರಿ ನೌಕರರಿಗೆ ಷಡಾಕ್ಷರಿ ಕರೆ

ದಾವಣಗೆರೆ: ಮಾರ್ಚ್ 1 ರಿಂದ ಕರೆ ನೀಡಿರುವ ಅನಿರ್ದಿಷ್ಟಾವಧಿ ಮುಷ್ಕರದಲ್ಲಿ ಎಲ್ಲಾ ಇಲಾಖೆಗಳ ನೌಕರರು ಕರ್ತವ್ಯಕ್ಕೆ ಗೈರುಹಾಜರಾಗುವ ಮೂಲಕ ಭಾಗವಹಿಸಬೇಕು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಕರೆ ನೀಡಿದ್ದಾರೆ.

ದಾವಣಗೆರೆಯಲ್ಲಿ ಭಾನುವಾರ ನಡೆದ ಶೈಕ್ಷಣಿಕ ಕಾರ್ಯಾಗಾರ, ರಾಜ್ಯಮಟ್ಟದ ಪದಾಧಿಕಾರಿಗಳ ಶೈಕ್ಷಣಿಕ ಸಮಾವೇಶ, ಸರ್ವ ಸದಸ್ಯರ ಮಹಾಸಭೆ ಉದ್ಘಾಟಿಸಿ ಅವರು ಮಾತನಾಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

7ನೇ ವೇತನ ಆಯೋಗ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಾರ್ಚ್ 1 ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲಾಗಿದೆ. ಎಲ್ಲಾ ಇಲಾಖೆಗಳ ನೌಕರರು ಕರ್ತವ್ಯಕ್ಕೆ ಗೈರಾಗುವ ಮೂಲಕ ಮುಷ್ಕರದಲ್ಲಿ ಭಾಗವಹಿಸಬೇಕು ಎಂದು ಹೇಳಿದ್ದಾರೆ.

ರಾಜ್ಯ ಬಜೆಟ್ ನಲ್ಲಿ ಮುಖ್ಯಮಂತ್ರಿಗಳು ನೌಕರರ ಬಗ್ಗೆ ಉದಾಸೀನ ತೋರಿದ್ದಾರೆ. ಅವರ ಧೋರಣೆಯಿಂದ 9 ಲಕ್ಷ ನೌಕರರಿಗೆ ಅನ್ಯಾಯವಾಗಿದೆ. ಮಾರ್ಚ್ 1 ರಿಂದ ನಡೆಯುವ ಮುಷ್ಕರದಲ್ಲಿ ಶಾಲೆ, ಕಾಲೇಜು, ಆಸ್ಪತ್ರೆ ಸೇರಿದಂತೆ ಎಲ್ಲಾ ಇಲಾಖೆಗಳ ನೌಕರರು ಕರ್ತವ್ಯಕ್ಕೆ ಗೈರುಹಾಜರಾಗುವ ಮೂಲಕ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ. 7ನೇ ವೇತನ ಆಯೋಗದ ವರದಿ ಜಾರಿ ಮಾಡುವವರೆಗೂ ಹೋರಾಟ ಮುಂದುವರೆಯಲಿದೆ. ಇನ್ನು ಎರಡು ದಿನ ಕಾಲಾವಕಾಶವಿದ್ದು, ಸರ್ಕಾರ ಸ್ಪಂದಿಸದಿದ್ದರೆ ಮುಷ್ಕರ ಅನಿವಾರ್ಯ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular