HomeKarnatakaಬೇಡಿಕೆ ಈಡೇರಿಸಲು ಸರ್ಕಾರದ ಭರವಸೆ: ನೋಂದಣಿ, ಮುದ್ರಾಂಕ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಮುಂದೂಡಿಕೆ

ಬೇಡಿಕೆ ಈಡೇರಿಸಲು ಸರ್ಕಾರದ ಭರವಸೆ: ನೋಂದಣಿ, ಮುದ್ರಾಂಕ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಮುಂದೂಡಿಕೆ

ಬೆಂಗಳೂರು: ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಸರ್ಕಾರ ಭರವಸೆ ನೀಡಿದ ಹಿನ್ನೆಲೆಯಲ್ಲಿ ಫೆಬ್ರವರಿ 27 ರಿಂದ ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರ ಮುಂದೂಡಲಾಗಿದೆ ಎಂದು ಕರ್ನಾಟಕ ರಾಜ್ಯ ನೋಂದಣಿ ಮತ್ತು ಮುದ್ರಾಂಕ ಇಲಾಖೆ ನೌಕರರ ಸಂಘ ತಿಳಿಸಿದೆ.

ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನು ನೌಕರರ ಸಂಘದ ನಿಯೋಗ ಭೇಟಿ ಮಾಡಿ ಬೇಡಿಕೆಗಳ ಈಡೇರಿಕೆ ಬಗ್ಗೆ ಚರ್ಚೆ ನಡೆಸಿದೆ. ಬಹುತೇಕ ಬೇಡಿಕೆಗಳನ್ನು ಈಡೇರಿಸಲು ಭರವಸೆ ನೀಡಿದ ಹಿನ್ನೆಲೆಯಲ್ಲಿ ಮುಷ್ಕರವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಸಮಸ್ಯೆಗಳನ್ನು ಪಟ್ಟಿ ಮಾಡಿ ದಾಖಲೆ ಸಹಿತ ಸಲ್ಲಿಸಿದರೆ ಸರ್ಕಾರದ ಗಮನ ಸೆಳೆದು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯ ಕಾರ್ಯದರ್ಶಿಗಳು ತಿಳಿಸಿದ್ದರಿಂದ ಮುಷ್ಕರ ಮುಂದೂಡಲಾಗಿದೆ. ಆದರೆ, ಸರ್ಕಾರ ಬೇಡಿಕೆಗಳನ್ನು ಈಡೇರಿಸಲು ವಿಳಂಬ ಮಾಡಿದರೆ ಕಚೇರಿ ಕೆಲಸ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುವುದು ಎಂದು ಸಂಘದ ಅಧ್ಯಕ್ಷ ಬಿ.ಹೆಚ್. ಶಂಕರೇಗೌಡ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular