HomeKarnatakaಖಾಸಗಿ ಸಾರಿಗೆ ಒಕ್ಕೂಟದ ಪ್ರತಿಭಟನೆ ವೇಳೆ ಗಲಾಟೆ, ಹಲ್ಲೆ: 12 ಮಂದಿ ಅರೆಸ್ಟ್

ಖಾಸಗಿ ಸಾರಿಗೆ ಒಕ್ಕೂಟದ ಪ್ರತಿಭಟನೆ ವೇಳೆ ಗಲಾಟೆ, ಹಲ್ಲೆ: 12 ಮಂದಿ ಅರೆಸ್ಟ್

ಬೆಂಗಳೂರು: ಖಾಸಗಿ ಸಾರಿಗೆ ಒಕ್ಕೂಟದ ಪ್ರತಿಭಟನೆ ವೇಳೆ ಹಲವೆಡೆ ಗಲಾಟೆ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲಗುಂಟೆ ಪೋಲಿಸ್ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿದೆ.

ರ್ಯಾಪಿಡೋ ಸವಾರ ವಿಜಯಕುಮಾರ್ ಮೇಲೆ ಹಲ್ಲೆ ಮಾಡಿದ್ದ ಪುನೀತ್, ಮಣಿ, ಶರಣ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರತಿಭಟನೆ ವೇಳೆ ಬೈಕ್ ಮಾಡಿದ್ದ ಆರೋಪಿಗಳು ಬಳಿಕ ಬೈಕ್ ಸವಾರ ವಿಜಯಕುಮಾರ್ ಮೇಲೆ ಹಲ್ಲೆ ಮಾಡಿದ್ದಾರೆ. ಸವಾರನ ಮುಖಕ್ಕೆ ಮೊಟ್ಟೆ ಒಡೆದು ಆರೋಪಿಗಳು ಬೆದರಿಕೆ ಹಾಕಿದ್ದಾರೆ. ಈ ಹಿನ್ನಲೆಯಲ್ಲಿ ಬಂಧಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಖಾಸಗಿ ಸಾರಿಗೆ ಒಕ್ಕೂಟದ ಪ್ರತಿಭಟನೆ ವೇಳೆ ಹಲವೆಡೆ ಗಲಾಟೆಗಳು ನಡೆದಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರಿನ ವಿವಿಧಡೆ 13 ಪ್ರಕರಣ ದಾಖಲಾಗಿದ್ದು, 12 ಜನರನ್ನು ಬಂಧಿಸಲಾಗಿದೆ.

ಕೇಂದ್ರ ವಿಭಾಗ 1, ಆಗ್ನೇಯ ವಿಭಾಗ 1, ಉತ್ತರ ವಿಭಾಗ ಹಾಗೂ ಈಶಾನ್ಯ ವಿಭಾಗ ತಲಾ 2, ಪಶ್ಚಿಮ ವಿಭಾಗದಲ್ಲಿ 7 ಕೇಸ್ ದಾಖಲಾಗಿವೆ. 13 ಕೇಸುಗಳಲ್ಲಿ 12 ಜನರನ್ನು ಪೊಲೀಸರು ಬಂಧಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular