ವೇತನ ಆಯೋಗ, ಒಪಿಎಸ್ ಗಾಗಿ ಮಾರ್ಚ್ 1 ರಿಂದ ಸರ್ಕಾರಿ ನೌಕರರ ಮುಷ್ಕರ

ಬೆಂಗಳೂರು: ಮಾರ್ಚ್ 1 ರಿಂದ ಮುಷ್ಕರ ನಡೆಸಲು ಸರ್ಕಾರಿ ನೌಕರರು ಸಿದ್ಧತೆ ಕೈಗೊಂಡಿದ್ದಾರೆ. ಮಧ್ಯಂತರ ವರದಿ ಪಡೆದು 7ನೇ ವೇತನ ಆಯೋಗ ಜಾರಿಗೊಳಿಸಬೇಕು. ಹೊಸ ಪಿಂಚಣಿ ಯೋಜನೆ ರದ್ದುಪಡಿಸಿ ಒಪಿಎಸ್ ಮುಂದುವರೆಸಬೇಕು ಎಂದು ಒತ್ತಾಯಿಸಲಾಗಿದ್ದು, ಬೇಡಿಕೆ ಈಡೇರಿಸದಿದ್ದರೆ ಮಾರ್ಚ್ 1 ರಿಂದ ಅನಿರ್ದಿಷ್ಟಾವಧಿ ಕರ್ತವ್ಯಕ್ಕೆ ಹಾಜರಾಗಲಾಗುವುದು ಎಂದು ಹೇಳಲಾಗಿದೆ.

ರಾಜ್ಯ ಸರ್ಕಾರ ನೌಕರರ ಸಂಘದಿಂದ ಈ ಕುರಿತಾಗಿ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿ, 7 ದಿನಗಳ ಗಡುವು ನೀಡಲಾಗಿದೆ. ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ಅಧ್ಯಕ್ಷತೆಯಲ್ಲಿ ನಡೆದ ಸಂಘದ ತುರ್ತು ಕಾರ್ಯಕಾರಣಿ ಸಭೆಯಲ್ಲಿ ಸರ್ಕಾರಕ್ಕೆ ತಿಳಿವಳಿಕೆ ಮತ್ತು ಮನವಿ ನೀಡಿ 7 ದಿನಗಳ ಗಡುವು ನೀಡಿ, ಬೇಡಿಕೆಗಳನ್ನು ಈಡೇರಿಸಿದಿದ್ದರೆ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಲು ತೀರ್ಮಾನಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read