HomeKarnatakaಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ ಸಾರಿಗೆ ನೌಕರರು: ಮಾ. 24 ರಿಂದ ಬಸ್ ಸೇವೆ ಸ್ಥಗಿತ

ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ ಸಾರಿಗೆ ನೌಕರರು: ಮಾ. 24 ರಿಂದ ಬಸ್ ಸೇವೆ ಸ್ಥಗಿತ

ಬೆಂಗಳೂರು: ವೇತನ ಹೆಚ್ಚಳ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಾರ್ಚ್ 24 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಸಾರಿಗೆ ನಿಗಮಗಳ ನೌಕರರ ಸಮಾನ ಮನಸ್ಕರ ವೇದಿಕೆ ಕರೆ ನೀಡಿದೆ.

ವೇದಿಕೆಯ ಅಧ್ಯಕ್ಷ ಚಂದ್ರಶೇಖರ್ ಈ ಕುರಿತು ಮಾಹಿತಿ ನೀಡಿದ್ದು, ಆರನೇ ವೇತನ ಆಯೋಗದ ಮಾದರಿಯಲ್ಲಿ ಸಾರಿಗೆ ನೌಕರರಿಗೆ ವೇತನ ನೀಡುವುದಾಗಿ 2021ರ ಏಪ್ರಿಲ್ ನಲ್ಲಿ ಸರ್ಕಾರ ಲಿಖಿತ ಭರವಸೆ ನೀಡಿತ್ತು. ಎರಡು ವರ್ಷ ಕಳೆದರೂ ಯಾವುದೇ ಬೇಡಿಕೆ ಈಡೇರಿಸಿಲ್ಲ. ಬಜೆಟ್ ನಲ್ಲಿಯೂ ಸಾರಿಗೆ ನೌಕರರ ಬೇಡಿಕೆಗಳ ಬಗ್ಗೆ ಉಲ್ಲೇಖಿಸಿಲ್ಲ. ಹೀಗಾಗಿ ಮುಷ್ಕರ ನಡೆಸಲಾಗುವುದು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನೌಕರರ ಸಮಸ್ಯೆಗಳ ಪರಿಹಾರಕ್ಕೆ ವಿವಿಧ ರೀತಿಯ ಹೋರಾಟ ನಡೆಸಿದ್ದರೂ ಸ್ಪಂದಿಸಿಲ್ಲ. ಮಾರ್ಚ್ 1 ರಿಂದ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದರೂ, ಯಾವೊಬ್ಬ ಅಧಿಕಾರಿ, ಜನಪ್ರತಿನಿಧಿ ಸ್ಥಳಕ್ಕೆ ಬಂದು ಸಮಸ್ಯೆ ಆಲಿಸಿಲ್ಲ. ಹೀಗಾಗಿ ಮಾರ್ಚ್ 24 ರಿಂದ ಬಸ್ ಸೇವೆ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular