HomeKarnatakaನಾಳೆಯಿಂದ ಸಾರಿಗೆ ನೌಕರರ ಮುಷ್ಕರಕ್ಕೆ ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದೆವು: ನೌಕರರ ಸಂಘದ ರಾಜ್ಯಾಧ್ಯಕ್ಷ ಚಂದ್ರಶೇಖರ್

ನಾಳೆಯಿಂದ ಸಾರಿಗೆ ನೌಕರರ ಮುಷ್ಕರಕ್ಕೆ ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದೆವು: ನೌಕರರ ಸಂಘದ ರಾಜ್ಯಾಧ್ಯಕ್ಷ ಚಂದ್ರಶೇಖರ್

ಬೆಂಗಳೂರು: ನಾಳೆಯಿಂದ ಸಾರಿಗೆ ನೌಕರರು ಕೈಗೊಂಡಿದ್ದ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. 3 ವಾರ ಮುಷ್ಕರ ನಡೆಸದಂತೆ ಸೂಚನೆ ನೀಡಿದೆ.

ಪಿಐಎಲ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮುಷ್ಕರಕ್ಕೆ ಬ್ರೇಕ್ ಹಾಕಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಾರಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ಚಂದ್ರಶೇಖರ್, ಇದೊಂದು ರಾಜಕೀಯ ಪಿತೂರಿ. ನಾಳೆಯಿಂದ ಮುಷ್ಕರಕ್ಕೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದ್ದೆವು. ಆದರೆ, ಯಾರೋ ಮಹಾನುಭಾವರು ಕೋರ್ಟ್ ಗೆ ಪಿಐಎಲ್ ಹಾಕಿದ್ದಾರೆ. ಮೂರು ವಾರ ಯಾವುದೇ ಮುಷ್ಕರ ನಡೆಸಿದಂತೆ ಹೈಕೋರ್ಟ್ ಸೂಚಿಸಿದೆ. ಪಿಐಎಲ್ ಹಾಕಿದ್ದ ಮಹಾನುಭಾವ ಸಾರಿಗೆ ನೌಕರರ ಸಮಸ್ಯೆ ತಿಳಿದುಕೊಳ್ಳಬೇಕಿತ್ತು. ಕೋರ್ಟ್ ಆದೇಶವನ್ನು ಪಾಲಿಸಿ ಮೂರು ವಾರಗಳ ಕಾಲ ಮುಷ್ಕರ ಮುಂದೂಡಿದ್ದೇವೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಷ್ಕರ ಮುಂದೂಡಿದ ಬಗ್ಗೆ ಎಲ್ಲಾ ನೌಕರರಿಗೂ ಮಾಹಿತಿ ನೀಡಿದ್ದೇವೆ. ಕಳೆದ ಬಾರಿ ಹೋರಾಟ ಮಾಡುವಾಗಲೂ ಇದೇ ರೀತಿ ಆಗಿತ್ತು ಎಂದು ಸಾರಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ಚಂದ್ರಶೇಖರ್ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular