HomeIndiaBIG NEWS : ನೇಪಾಳದಲ್ಲಿ ಪ್ರಬಲ ಭೂಕಂಪ : ಉತ್ತರ ಪ್ರದೇಶ, ಬಿಹಾರದಲ್ಲೂ ಕಂಪಿಸಿದ ಭೂಮಿ

BIG NEWS : ನೇಪಾಳದಲ್ಲಿ ಪ್ರಬಲ ಭೂಕಂಪ : ಉತ್ತರ ಪ್ರದೇಶ, ಬಿಹಾರದಲ್ಲೂ ಕಂಪಿಸಿದ ಭೂಮಿ

ನವದೆಹಲಿ: ನೇಪಾಳದಲ್ಲಿ ಇಂದು ಬೆಳಿಗ್ಗೆ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 5.3ರಷ್ಟಿತ್ತು ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಉತ್ತರ ಪ್ರದೇಶ, ಬಿಹಾರದಲ್ಲೂ ಭೂಕಂಪದ ಅನುಭವವಾಗಿದೆ.

ನೇಪಾಳದ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಪ್ರಕಾರ, ಭೂಕಂಪದ ಕೇಂದ್ರಬಿಂದು ಕಠ್ಮಂಡುವಿನ ಪಶ್ಚಿಮಕ್ಕೆ 55 ಕಿ.ಮೀ ದೂರದಲ್ಲಿರುವ ಧಡಿಂಗ್ನಲ್ಲಿ 14 ಕಿ.ಮೀ ಆಳದಲ್ಲಿತ್ತು. ಬೆಳಿಗ್ಗೆ 7:24 ಕ್ಕೆ ಭೂಕಂಪನ ಸಂಭವಿಸಿದೆ. ಭೂಕಂಪದಿಂದಾಗಿ ಈವರೆಗೆ ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿ ನಷ್ಟದ ಬಗ್ಗೆ ವರದಿಯಾಗಿಲ್ಲ.

ಕಳೆದ ವಾರ ದೆಹಲಿ-ಎನ್ಸಿಆರ್ನ ಲ್ಲಿ ಭೂಕಂಪ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಳೆದ ವಾರ ದೆಹಲಿ-ಎನ್ಸಿಆರ್ನಲ್ಲಿ ಭಾನುವಾರ ಪ್ರಬಲ ಭೂಕಂಪನ ಸಂಭವಿಸಿದೆ. ದೆಹಲಿಯ ಜೊತೆಗೆ ನೋಯ್ಡಾ, ಗಾಜಿಯಾಬಾದ್ ಮತ್ತು ಹರಿಯಾಣದ ಜನರು ಸಹ ಭೂಕಂಪನದ ಅನುಭವವನ್ನು ಅನುಭವಿಸಿದರು. ಭೂಕಂಪದ ಕೇಂದ್ರ ಬಿಂದು ಫರಿದಾಬಾದ್ ಆಗಿತ್ತು. ಇದಕ್ಕೂ ಮುನ್ನ ಅಕ್ಟೋಬರ್ 3 ರಂದು ರಾಜಧಾನಿ ದೆಹಲಿ-ಎನ್ಸಿಆರ್ನಲ್ಲಿ ಭೂಕಂಪನದ ಅನುಭವವಾಗಿತ್ತು. ಭೂಕಂಪದ ತೀವ್ರತೆ ಎಷ್ಟಿತ್ತೆಂದರೆ ಜನರು ಮನೆಗಳು ಮತ್ತು ಕಚೇರಿಗಳಿಂದ ಹೊರಬಂದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular