HomeIndia8ನೇ ತರಗತಿ ವಿದ್ಯಾರ್ಥಿನಿ ಮೇಲೆ ಆಸಿಡ್ ಎರಚಿ ವಿಕೃತಿ ಮೆರೆದ ದುಷ್ಕರ್ಮಿಗಳು

8ನೇ ತರಗತಿ ವಿದ್ಯಾರ್ಥಿನಿ ಮೇಲೆ ಆಸಿಡ್ ಎರಚಿ ವಿಕೃತಿ ಮೆರೆದ ದುಷ್ಕರ್ಮಿಗಳು

8ನೇ ತರಗತಿ ವಿದ್ಯಾರ್ಥಿನಿಯನ್ನು ಅಪಹರಿಸಿದ ದುಷ್ಕರ್ಮಿಗಳು ಆಕೆಯ ಮೇಲೆ ಆಸಿಡ್ ಎರಚಿ, ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಅಮ್ರೋಹಾದಲ್ಲಿ ನಡೆದಿದೆ.

ಬಾಲಕಿಯನ್ನು ಆಕೆಯ ಮನೆಯಿಂದ ಕಿಡ್ನ್ಯಾಪ್ ಮಾಡಿದ ಇಬ್ಬರು ದುಷ್ಕರ್ಮಿಗಳು, ಆಕೆಯ ಮೇಲೆ ಹಲ್ಲೆ ನಡೆಸಿದ್ದಲ್ಲದೇ ಆಸಿಡ್ ಎರಚಿ ಚಿತ್ರಹಿಂಸೆ ನೀಡಿದ್ದಾರೆ. ಸದ್ಯ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಮ್ರೋಹಾದ ರಾಹ್ರಾ ಪೊಲೀಸ್ ಠಾಣೆ ವ್ಯಾಪ್ತಿಯ ಪತ್ರಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮುಂಜಾನೆ 3:30ರ ಸುಮಾರಿಗೆ ಈ ಘಟನೆ ನಡೆದಿದ್ದು, ಬಾಲಕಿ ಸ್ಥಿತಿ ಗಂಭೀರವಾಗಿದೆ ಎಂದು ಹೆಚ್ಚುವರಿ ಎಸ್ ಪಿ ರಾಜೀವ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಾಲಕಿ ಮನೆಯಲ್ಲಿ ಮಲಗಿದ್ದಾಗ ಮನೆಗೆ ನುಗ್ಗಿದ ದುಷ್ಕರ್ಮಿಗಳು ಆಕೆಯ ಬಾಯಿಗೆ ಬಟ್ಟೆ ತುರುಕಿ ಅರಣ್ಯಕ್ಕೆ ಎಳೆದೊಯ್ದಿದ್ದಾರೆ. ಬಾಲಕಿ ಸಹೋದರ ರಹ್ರಾ ಠಾಣೆಯಲ್ಲಿ ದೂರು ದಾಖಲಿಸಿದ್ದಾನೆ. ಅದೇ ಗ್ರಾಮದ ರಾಂಪಾಲ್ ಎಂಬಾತ ಈ ಕೃತ್ಯವೆಸಗಿದ್ದಾನೆ ಎನ್ನಲಾಗಿದೆ. ಪ್ರಕರಣ ದಾಖಲಾಗಿದ್ದು, ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸುವುದಾಗಿ ತಿಳಿಸಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular