HomeKarnatakaವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಜೂ. 30 ರವರೆಗೆ ಬಸ್ ಪಾಸ್ ಅವಧಿ ವಿಸ್ತರಣೆ

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಜೂ. 30 ರವರೆಗೆ ಬಸ್ ಪಾಸ್ ಅವಧಿ ವಿಸ್ತರಣೆ

ಬೆಂಗಳೂರು: ವಿದ್ಯಾರ್ಥಿಗಳ ಹಳೆಯ ಬಸ್ ಪಾಸ್ ಅವಧಿಯನ್ನು ಜೂನ್ 30ರವರೆಗೆ ವಿಸ್ತರಣೆ ಮಾಡಲಾಗಿದೆ. ರಾಜ್ಯದಲ್ಲಿ ಶಾಲೆಗಳು ಆರಂಭವಾಗಿದ್ದು, ಇನ್ನೂ ಕೆಎಸ್ಆರ್ಟಿಸಿ ವತಿಯಿಂದ ವಿದ್ಯಾರ್ಥಿಗಳಿಗೆ ಬಸ್ ಪಾಸ್ ವಿತರಿಸಿಲ್ಲ.

ಈ ಹಿನ್ನೆಲೆಯಲ್ಲಿ ಕಳೆದ ಶೈಕ್ಷಣಿಕ ವರ್ಷದಲ್ಲಿ ನೀಡಲಾದ ಬಸ್ ಪಾಸ್ ಅನ್ನು ಜೂನ್ 30ರವರೆಗೆ ಬಳಸಿಕೊಂಡು ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ಪ್ರಸಕ್ತ ಸಾಲಿನ ವಿದ್ಯಾರ್ಥಿ ಪಾಸ್ ಪಡೆಯಲು ಜೂನ್ 12 ರವರೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲ ಅವಕಾಶ ಕಲ್ಪಿಸಲಾಗಿತ್ತು. ಇನ್ನು ಬಸ್ ಪಾಸ್ ವಿತರಣೆಯಾಗದ ಕಾರಣ ಹೊಸ ಪಾಸ್ ವಿತರಿಸುವವರೆಗೆ ಕೆ.ಎಸ್.ಆರ್.ಟಿ.ಸಿ. ಬಸ್ ಗಳಲ್ಲಿ ಹಳೆಯ ಬಸ್ ಪಾಸ್ ಗಳನ್ನು ತೋರಿಸಿ ಪ್ರಯಾಣಿಸಬಹುದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular