HomeKarnatakaಏ. 10ರವರೆಗೆ ವಿದ್ಯಾರ್ಥಿಗಳ ಬಸ್ ಪಾಸ್ ಅವಧಿ ವಿಸ್ತರಣೆ

ಏ. 10ರವರೆಗೆ ವಿದ್ಯಾರ್ಥಿಗಳ ಬಸ್ ಪಾಸ್ ಅವಧಿ ವಿಸ್ತರಣೆ

ಬೆಂಗಳೂರು: ರಾಜ್ಯದಲ್ಲಿ 1ರಿಂದ 9ನೇ ತರಗತಿವರೆಗಿನ ಅಂತಿಮ ಪರೀಕ್ಷೆ ಏಪ್ರಿಲ್ 10ರವರೆಗೆ ನಡೆಯುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು ವಿಸ್ತರಿಸಲಾಗಿದೆ.

ಕೆಎಸ್ಆರ್ಟಿಸಿ ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು ಏಪ್ರಿಲ್ 10ರವರೆಗೆ ವಿಸ್ತರಿಸಿದೆ. ಒಂದರಿಂದ ಒಂಬತ್ತನೇ ತರಗತಿವರೆಗಿನ ವಿದ್ಯಾರ್ಥಿಗಳ ಬಸ್ ಪಾಸ್ ಅವಧಿ ಮಾರ್ಚ್ 31ಕ್ಕೆ ಅಂತ್ಯವಾಗಿದೆ. ಆದರೆ, ಅಂತಿಮ ಪರೀಕ್ಷೆ ಏಪ್ರಿಲ್ 10ರವರೆಗೆ ನಡೆಯಲಿದ್ದು, ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬಸ್ ಪಾಸ್ ಅವಧಿಯನ್ನು ಏಪ್ರಿಲ್ 10ರವರೆಗೆ ವಿಸ್ತರಿಸಲಾಗಿದೆ. ಈ ಕುರಿತಂತೆ ಚಾಲಕರು ಮತ್ತು ನಿರ್ವಾಹಕರಿಗೆ ಸೂಚನೆ ನೀಡುವಂತೆ ಎಲ್ಲಾ ವಿಭಾಗೀಯ ನಿಯಂತ್ರಣ ಅಧಿಕಾರಿಗಳಿಗೆ ಕೆಎಸ್ಆರ್ಟಿಸಿ ಮುಖ್ಯ ಸಂಚಾರ ವ್ಯವಸ್ಥಾಪಕರು ನಿರ್ದೇಶಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular