HomeKarnatakaಪರೀಕ್ಷೆ ಫಲಿತಾಂಶ ತಡೆಹಿಡಿದಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ

ಪರೀಕ್ಷೆ ಫಲಿತಾಂಶ ತಡೆಹಿಡಿದಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ

ಚಿಕ್ಕಮಗಳೂರು: ವಾರ್ಷಿಕ ಪರೀಕ್ಷೆ ಫಲಿತಾಂಶ ತಡೆ ಹಿಡಿದಿದ್ದಕ್ಕೆ ಮನನೊಂದು ಒಂಬತ್ತನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತರೀಕೆರೆ ತಾಲೂಕಿನ ಎಂಸಿ ಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

ಕೌಶಲ್ಯ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಒಂಬತ್ತನೇ ತರಗತಿ ವಾರ್ಷಿಕ ಪರೀಕ್ಷೆ ಫಲಿತಾಂಶ ತಡೆಹಿಡಿದ ಕಾರಣಕ್ಕೆ ಮನನೊಂದು ದುಡುಕಿನ ನಿರ್ಧಾರ ಕೈಗೊಂಡಿದ್ದಾಳೆ. ಕೌಶಲ್ಯ ಜೊತೆಗೆ ಶಾಲೆಗೆ ತೆರಳಿದ ಅವರ ತಾಯಿ ಫಲಿತಾಂಶದ ಬಗ್ಗೆ ವಿಚಾರಿಸಿದ್ದಾರೆ. ಕೆಲವು ವಿಷಯದಲ್ಲಿ ಹಿಂದುಳಿದಿದ್ದ ವಿದ್ಯಾರ್ಥಿಗಳಿಗೆ ಜೂನ್ ನಲ್ಲಿ ಮರು ಪರೀಕ್ಷೆ ಬರೆಯಲು ಅವಕಾಶವಿದೆ. ಪರೀಕ್ಷೆ ಬರೆದು ಉತ್ತೀರ್ಣರಾಗುವಂತೆ ತಿಳಿಸಲಾಗಿತ್ತು. ಇದರಿಂದ ಮನನೊಂದ ಕೌಶಲ್ಯ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular